ಮುಂಬೈ : ಸೆ.6ರಂದು 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

0
7

ಮುಂಬೈ : ಜಯ ಸಿ. ಸುವರ್ಣ ಅಭಿಮಾನಿಗಳು, ಶ್ರೀ ನಾರಾಯಣ ಗುರು ಭಜನಾ ಮಂಡಳ್, ಮಲಾಡ್ ಹಾಗೂ ಮಲಾಡ್ ಬಿಲ್ಲವಾಸ್ ಆಶ್ರಯದಲ್ಲಿ ಸೆಪ್ಟೆಂಬರ್ 6ರಂದು 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಮಲಾಡ್ ಪೂರ್ವದ ಡಫ್ತರಿ ರಸ್ತೆಯ ಪುಷ್ಪಾ ಪಾರ್ಕ್ ಸಮೀಪದಲ್ಲಿರುವ ಉತ್ಕರ್ಷ್ ವಿದ್ಯಾ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಂಗವಾಗಿ ಸಂಜೆ 6ರಿಂದ 7ರವರೆಗೆ ಭಜನೆ ಹಾಗೂ ಜಪ–ಯಜ್ಞ ನಡೆಯಲಿದ್ದು, ಬಳಿಕ ಮಂಗಳಾರತಿ, ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 7.30ಕ್ಕೆ ಸಭಾ ಕಾರ್ಯಕ್ರಮ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ವಿತರಣೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಭಾರತ್ ಸಹಕಾರಿ ಬ್ಯಾಂಕ್ (ಮುಂಬೈ) ಲಿಮಿಟೆಡ್‌ನ ಕಾರ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ, ಮೂಲ್ಕಿ ಇದರ ಅಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಉದ್ಯಮಿಗಳಾದ ಸುರೇಶ್ ಎಸ್. ಶೆಟ್ಟಿ, ಚಂದ್ರಹಾಸ್ ಆರ್. ಸುವರ್ಣ ಹಾಗೂ ಮನೀಶ್ ಹೆಚ್. ಪೂಜಾರಿ (ಶಿಪ್ಪಿಂಗ್, ತೃತೀಯ ಶ್ರೇಣಿ ಇಂಜಿನಿಯರ್) ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಶ್ರೀ ನಾರಾಯಣ ಗುರು ಭಜನಾ ಮಂಡಳ್, ಮಲಾಡ್ ಅಧ್ಯಕ್ಷ ಅಶೋಕ್ ಕುಕ್ಕಿಯಾನ್ ಸಸಿಹಿತ್ಲು, ಗೌರವ ಕಾರ್ಯಾಧ್ಯಕ್ಷ ಸಂತೋಷ್ ಕೆ. ಪೂಜಾರಿ ಹಾಗೂ ಅಧ್ಯಕ್ಷ ಹರಿಶ್ಚಂದ್ರ ಕೆ. ಪೂಜಾರಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪ್ರಸಾದ ಹಾಗೂ ಅನ್ನಪ್ರಸಾದವನ್ನು ಸ್ವೀಕರಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಕಾರ್ಯಕ್ರಮದ ಯಶಸ್ಸಿಗಾಗಿ ಶ್ರೀ ನಾರಾಯಣ ಗುರು ಭಜನಾ ಮಂಡಳ್‌ನ ಗೌರವ ಕಾರ್ಯದರ್ಶಿ ಕೇಶವ ಎಸ್. ಪೂಜಾರಿ, ಕೋಶಾಧಿಕಾರಿ ಸಬಿತಾ ಜಿ. ಪೂಜಾರಿ, ಜಯ ಸಿ. ಸುವರ್ಣ ಅಭಿಮಾನಿಗಳು ಮತ್ತು ಮುಂಬೈ ಬಿಲ್ಲವಾಸ್ ಪರವಾಗಿ ಕಾರ್ಯದರ್ಶಿ ಮೋಹನ್‌ದಾಸ್ ಜಿ. ಪೂಜಾರಿ, ಖಜಾಂಚಿ ಶಿವರಾಮ ಪೂಜಾರಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಶ್ರಮಿಸುತ್ತಿದ್ದಾರೆ.

ಶ್ರೀ ನಾರಾಯಣ ಗುರು ಭಜನಾ ಮಂಡಳ್, ಮಲಾಡ್ ಪರವಾಗಿ ಉಪಾಧ್ಯಕ್ಷರಾದ ಕೃಷ್ಣ ಎ. ಪೂಜಾರಿ, ಗಣೇಶ್ ಎಸ್. ಪೂಜಾರಿ, ಕಾರ್ಯದರ್ಶಿ ದಿನೇಶ್ ಸಿ. ಸಾಲಿಯಾನ್, ಜೊತೆ ಕಾರ್ಯದರ್ಶಿ ಚೇತನ ಡಿ. ಪೂಜಾರಿ, ಕೋಶಾಧಿಕಾರಿ ದೀಕ್ಷಿತ್ ಎಂ. ಪೂಜಾರಿ, ಜೊತೆ ಕೋಶಾಧಿಕಾರಿ ನಳಿನಿ ಪಿ. ಕರ್ಕೇರ ಹಾಗೂ ಅರ್ಚಕರಾದ ಜಯ ಎಸ್. ಪೂಜಾರಿ, ಸುಂದರ್ ಎಂ. ಪೂಜಾರಿ ಮತ್ತು ರಾಮ ಡಿ. ಪೂಜಾರಿ ಸೇರಿದಂತೆ ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಹಾಗೂ ಎಲ್ಲಾ ಸಮಿತಿ ಸದಸ್ಯರು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರು ಅವರ ತತ್ವಾದರ್ಶಗಳನ್ನು ಸ್ಮರಿಸುತ್ತಾ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಕೋರಿದ್ದಾರೆ.