Sunday, July 21, 2024
Homeರಾಷ್ಟ್ರೀಯಮುಂಬಯಿ ತುಳುವರಿಂದ ತುಳುನಾಡಿನ ಅಭಿವೃದ್ಧಿಗೆ ವಿಶೇಷ ಕೊಡುಗೆ: ಯು.ಟಿ. ಖಾದರ್‌

ಮುಂಬಯಿ ತುಳುವರಿಂದ ತುಳುನಾಡಿನ ಅಭಿವೃದ್ಧಿಗೆ ವಿಶೇಷ ಕೊಡುಗೆ: ಯು.ಟಿ. ಖಾದರ್‌

ಮುಂಬಯಿ ಬಿಲ್ಲವರ ಅಸೋಸಿಯೇಶನ್‌ನಿಂದ ನೂತನ ಸಮುದಾಯ ಭವನ ಲೋಕಾರ್ಪಣೆ
ನವಿಮುಂಬಯಿ: ಮುಂಬಯಿಯಲ್ಲಿರುವ ತುಳು-ಕನ್ನಡಿಗರು ತುಳುನಾಡಿನ ಅಭಿವೃದ್ಧಿಯಲ್ಲಿ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಹೇಳಿದರು. ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ವತಿಯಿಂದ ವಾಶಿಯ ಸಿಡ್ಕೊ ಕನ್ವೆನ್ಷನ್‌ ಸೆಂಟರ್‌ನಲ್ಲಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ನವಿಮುಂಬಯಿ ಸ್ಥಳೀಯ ಸಮಿತಿಯು ಸಾನ್ಸಾಡಾ ಸೆಕ್ಟರ್‌ 10ರಲ್ಲಿ ನಿರ್ಮಿಸಿದ ನೂತನ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ತುಳುನಾಡು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ನಾವು ಶ್ರಮಿಸಬೇಕು. ಮುಂಬಯಿಯಲ್ಲಿ ವಿವಿಧ ಜಾತಿ ಸಂಘಗಳ ಮೂಲಕ ಸಮಾಜ ಬಾಂಧವರ ಅಭಿವೃದ್ಧಿಯಲ್ಲಿ ತುಳುನಾಡಿನ ಜನರು ತೊಡಗರುವುದು ನೋಡಿದಾಗ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿಯವರ ಗರಡಿಯಲ್ಲಿ ಪಳಗಿದ ನನಗೆ ಅಭಿಮಾನವಾಗುತ್ತಿದೆ ಎಂದು ಅವರು ಹೇಳಿದರು.
ಮುಂಬಯಿಯಂತಹ ಮಹಾನಗರದಲ್ಲಿ ವಿವಿಧ ಜಾತಿಯ ಸಂಘ ಸಂಸ್ಥೆಗಳು ತಮ್ಮ ಸಮುದಾಯದ ಅಭಿವೃದ್ಧಿಗಾಗಿ ನಿರಂತರ ಕೆಲಸ ಮಾಡುತ್ತಿವೆ. ವಿವಿಧ ಸಮಾಜದವರು ಒಬ್ಬರಿಗೊಬ್ಬರು ಸಹಕರಿಸುತ್ತಾ ತಮ್ಮ ಸಂಘ ಸಂಸ್ಥೆಗಳ ಮೂಲಕ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಈ ಭವನ ಸಮಾಜದ ಅಭಿವೃದ್ಧಿಗೆ ಪೂರಕವಾಗಿದೆ. ಇನ್ನಷ್ಟು ಇಂತಹ ಕಾರ್ಯಗಳು ನಡೆಯಲಿ ಎಂದು ಬಿಎಸ್‌ಕೆಬಿ ಅಧ್ಯಕ್ಷ ಡಾ. ಸುರೇಶ್‌ ರಾವ್‌ ಹಾರೈಸಿದರು. ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್.‌ ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿಯ ಅಧ್ಯಕ್ಷ ಹರೀಶ್‌ ಜಿ. ಅಮೀನ್‌, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘ, ಮುಂಬಯಿ ಇದರ ಅಧ್ಯಕ್ಷ ಪ್ರವೀಣ್‌ ಭೋಜ ಶೆಟ್ಟಿ, ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕರು ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಬಂಟರ ಸಂಘ ಮುಂಬಯಿ ಜೊತೆ ಕೋಶಾಧಿಕಾರಿ ಶಶಿಧರ್‌ ಶೆಟ್ಟಿ ಇನ್ನಂಜೆ, ವಾಸ್ತು ತಜ್ಞ ಅಶೋಕ್‌ ಪುರೋಹಿತ್‌, ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಬಿಲ್ಲವರ ಅಸೋಸಿಯೇಶನ್‌ ಹರೀಶ್‌ ಜಿ. ಅಮೀನ್‌ ದಂಪತಿ, ನವಿಮುಂಬಯಿಯ ಸ್ಥಳೀಯ ಸಮಿತಿಯ ಗೌರವಾಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಅಧ್ಯಕ್ಷ ವಿಶ್ವನಾಥ ಪೂಜಾರಿ ದಂಪತಿ, ಗೌರವ ಕಾರ್ಯದರ್ಶಿ ಡಿ.ಕೆ. ಸುವರ್ಣ ಅವರನ್ನು ಸನ್ಮಾನಿಸಲಾಯಿತು.
ಬಿಲ್ಲವ ಚೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ಎನ್.ಟಿ. ಪೂಜಾರಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಅಧ್ಯಕ್ಷ ರಾಜಶೇಖರ ಕೋಟ್ಯಾನ್‌, ರಾಜಕೀಯ ಮುಖಂಡ ಸುರೇಶ್‌ ಶೆಟ್ಟಿ ಯೆಯ್ಯಾಡಿ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಉಪಾಧ್ಯಕ್ಷರಾದ ಸುರೇಶ್‌ ಕುಮಾರ್‌, ಶಂಕರ್‌ ಡಿ. ಪೂಜಾರಿ, ಧರ್ಮಪಾಲ್‌ ಅಂಚನ್‌, ಜಯಂತಿ ವಿ. ಉಳ್ಳಾಲ್‌, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್‌ ಜಿ. ಸಾಲ್ಯಾನ್‌, ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಕುಂತಳಾ ಕೆ. ಕೋಟ್ಯಾನ್‌, ನವಿ ಮುಂಬಯಿ ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಕಾರ್ಯಾಧ್ಯಕ್ಷ ವಿಶ್ವನಾಥ ಕೆ. ಪೂಜಾರಿ, ಕಾರ್ಯದರ್ಶಿ ಶಿವರಾಮ್‌ ಕೆ. ಪೂಜಾರಿ, ಕೋಶಾಧಿಕಾರಿ ಶೇಖರ್‌ ಬಿ. ಪಾಲನ್‌, ಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ನವಿಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ಕೆ. ಪೂಜಾರಿ ಸ್ವಾಗತಿಸಿದರು. ಬಿಲ್ಲವರ ಅಸೋಸಿಯೇಶನ್‌ ಜೊತೆ ಕಾರ್ಯದರ್ಶಿ ಕೇಶವ ಕೋಟ್ಯಾನ್‌ ಅತಿಥಿಗಳನ್ನು ಪರಿಚಯಿಸಿದರು. ಗೌರವ ಕಾರ್ಯದರ್ಶಿ ಹರೀಶ್‌ ಜಿ. ಸಾಲ್ಯಾನ್‌ ಪ್ರಾಸ್ತಾವಿಸಿದರು. ಜೊತೆ ಕಾರ್ಯದರ್ಶಿ ರವಿ ಸಾಲ್ಯಾನ್‌ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular