ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ 26ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದಲ್ಲಿ ಮುಂಬೈ ಉದ್ಯಮಿ, ಕೊಡುಗೈ ದಾನಿ, ಮುಂಬೈ ಬಿಲ್ಲವರ ಎಸೋಸಿಯೇಷನ್ ಕಾರ್ಯಾಧ್ಯಕ್ಷರಾದ ಹರೀಶ್ ಡಿ. ಸಾಲ್ಯಾನ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಸುರೇಶ್ ಪೂಜಾರಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಕಟಪಾಡಿ, ಕಂಬಳ ಕ್ಷೇತ್ರದ ಬೋಳದ ಗುತ್ತು ಸಂತೋಷ್ ಶೆಟ್ಟಿ, ಉದ್ಯಮಿಗಳಾದ ಹರೀಶ್ ಕುಮಾರ್, ಉದ್ಯಮಿ ಸುನಿಲ್ ಪೂಜಾರಿ, ನಿಟ್ಟೆ ರೈತ ಉತ್ಪಾದಕರ ಸಂಘದ ನಿರ್ದೇಶಕರಾದ ವೆಂಕಟಕೃಷ್ಣ ಭಟ್, ಅಬ್ಬನಡ್ಕ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಪ್ರೇಮ ಕುಲಾಲ್, ಕೆದಿಂಜೆ ಸಂಜೀವ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರು ಕಾರ್ಯಕ್ರಮ ನಿರೂಪಿಸಿದರು. ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಸ್ವಾಗತಿಸಿದರು. ಕಾರ್ಯದರ್ಶಿ ಸತೀಶ್ ಪೂಜಾರಿ ವಂದಿಸಿದರು.

