ಮುಂಬೈ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರ ಸಾವು

0
933

ಮಂಗಳೂರು/ಮುಂಬೈ: ಲೋಕಲ್ ಟ್ರೈನ್‌ನಿಂದ ಹಳಿಗೆ ಬಿದ್ದು ಐವರು ಪ್ರಯಾಣಿಕರು ಮೃ*ತಪಟ್ಟಿರುವ ಘಟನೆ ಮುಂಬೈನಲ್ಲಿ ಸೋಮವಾರ (ಜೂ.09) ನಡೆದಿದೆ.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ಸ್ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ರೈಲಿನಿಂದ ಪ್ರಯಾಣಿಕರು ಹಳಿಗೆ ಬಿದ್ದಿದ್ದಾರೆ. ಅಧಿಕಾರಿಗಳ ಪ್ರಕಾರ, ಕನಿಷ್ಠ 10 ರಿಂದ 12 ಪ್ರಯಾಣಿಕರು ರೈಲಿನಿಂದ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ರೈಲಿನಲ್ಲಿ ಜನದಟ್ಟಣೆ ಹೆಚ್ಚಾಗಿದ್ದು ಮತ್ತು ಘಟನೆ ಸಂಭವಿಸಿದಾಗ ಪ್ರಯಾಣಿಕರು ಬಾಗಿಲಿನಲ್ಲಿ ನೇತಾಡುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ರೈಲ್ವೆ ಹಳಿಗಳಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.

LEAVE A REPLY

Please enter your comment!
Please enter your name here