ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಇಂದು ಮತ್ತೆ ಮೂವರನ್ನು ಬಂಧಸಿದ್ದಾರೆ. ಬಂಧಿತರು ಪ್ರಕರಣದ ಆರೋಪಿಗಳಾದ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಫಿ ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ನಿನ್ನೆ ಮೂವರ ಬಂಧನವಾಗಿತ್ತು. ಹನಿಟ್ರಾಪ್ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟು ಸತಾಯಿಸಿದ್ದರಿಂದ ಮನನೊಂದು ಮುಮ್ತಾಜ್ ಅಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಗಿತ್ತು.