ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವಾ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಪ್ರಕರಣದ ಎ1 ಆರೋಪಿ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೋಯೆಬ್ ಮತ್ತು ಸಿರಾಜ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ರೆಹಮತ್ ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿತ್ತು. ಆದರೆ ಇದೀಗ ಬಂಟ್ವಾಳದ ಕಲ್ಲಡ್ಕದ ಬಳಿ ರೆಹಮತ್ ಬಂಧನವಾಗಿದೆ. ಪ್ರಕರಣದ ಮಾಸ್ಟರ್‌ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್‌ಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಆರೋಪಿಗಳು ಮುಮ್ತಾಜ್ ಅಲಿ ಅವರನ್ನು ಬ್ಲಾಕ್ ಮೇಲ್ ಮಡಿದ್ದರು ಎನ್ನಲಾಗಿದೆ. ಮುಮ್ತಾಜ್‌ರನ್ನು ಹನಿಟ್ರಾಪ್ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು. ಘಟನೆಗೆ ಸಂಬಂಧಿಸಿ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.