ಕಡಬ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು (ಕಡಬ ತಾಲೂಕು), ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಹಾಗೂ ಎಸ್.ಡಿ.ಎಂ.ಸಿ ಕುದ್ಮಾರು ಶಾಲೆ ಇವರ ಸಹಕಾರದೊಂದಿಗೆ ಮತ್ತು ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ “ಕುದ್ಮಾರು ಸಂಭ್ರಮ ಶನಿವಾರ … ಮುಂಗಾರು ಸಾಹಿತ್ಯ ಕಲರವ-2026” ಸಾಹಿತ್ಯಿಕ ಕಾರ್ಯಕ್ರಮವು ಜುಲೈ 18ರ ಶನಿವಾರದಂದು ಆಯೋಜನೆಗೊಂಡಿದೆ.
ಕುದ್ಮಾರು ಶಾಲಾ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.00 ರವರೆಗೆ ಸಾಹಿತ್ಯ ಮತ್ತು ಸಂಸ್ಕೃತಿಯ ಈ ವಿಶಿಷ್ಟ ಮಿಲನ ನಡೆಯಲಿದೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಆಕರ್ಷಕ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದ್ದು, ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತಿ ಇರುವ ಕಡಬ ಸುಳ್ಯ ಪುತ್ತೂರು ತಾಲೂಕಿನ ಕವಿಗಳು ಹಾಗೂ ಸಾಹಿತ್ಯಾಸಕ್ತರು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಕವಿಗೋಷ್ಠಿ ಹೆಸರು ನೋಂದಣಿಗಾಗಿ ಸಂಪರ್ಕಿಸಿ:
ಕಾರ್ಯಕ್ರಮ ಸಂಯೋಜಕರಾದ ನಾರಾಯಣ ಕುಂಬ್ರ (ಮೊಬೈಲ್ ಸಂಖ್ಯೆ: 8073319717) ಅವರನ್ನು ಸಂಪರ್ಕಿಸಿ ಹೆಸರು ಕಾಯ್ದಿರಿಸಬಹುದಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಾಹಿತ್ಯಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಗಿದೆ.
