Wednesday, September 11, 2024
Homeಅಪರಾಧಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕುವಿನಿಂದ ಇರಿದ ಯುವಕ! | ಆಸ್ಪತ್ರೆಗೆ ದಾಖಲು

ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಚಾಕುವಿನಿಂದ ಇರಿದ ಯುವಕ! | ಆಸ್ಪತ್ರೆಗೆ ದಾಖಲು

ತುಮಕೂರು: ತನ್ನನ್ನು ಪ್ರೀತಿ‌ಸುವುದಕ್ಕೆ ನಿರಾಕರಿಸಿದ ಮಂಗಳಮುಖಿಗೆ ಯುವಕನೊಬ್ಬ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಆದರೆ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವುದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹನೀಷಾ ಎಂಬ 21 ವರ್ಷದ ಮಂಗಳಮುಖಿಗೆ ಮಂಡ್ಯದ ಆದಿಲ್‌ ಎಂಬ 23 ವರ್ಷದ ಯುವಕ ಚಾಕುವಿನಿಂದ ಇರಿದಿದ್ದಾನೆ.
ಹನೀಷಾ ಹಾಗೂ ಆದಿಲ್ ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಹನೀಷಾ ಆಗಾಗ ಬೇರೆ ಬೇರೆ ಊರುಗಳಿಗೆ ಹೋಗುತ್ತಿದ್ದಳು. ಇದನ್ನು ಸಹಿಸದ ಆದಿಲ್‌, ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತು ಪ್ರೇಮ ನಿರಾಕರಿಸಿದ ಹಿನ್ನೆಲೆಯಲ್ಲಿ, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಆದಿಲ್ ಚಾಕುವಿನಿಂದ ಇರಿದಿರುವುದಾಗಿ ವರದಿಯಾಗಿದೆ. ಗಾಯಗೊಂಡಿರುವ ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular