ಮಹಿಳೆಯ ವಿಚಾರಕ್ಕೆ ವ್ಯಕ್ತಿಯ ಕೊಲೆ

0
58

ಉಡುಪಿ: ಕಾರ್ಕಳ ನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿಯಲ್ಲಿ ಮಹಿಳೆ ಜೊತೆ ಸಲುಗೆಯ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಗಳವಾರ ನಸುಕಿನ ವೇಳೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಮೂಲದ ನವೀನ್​ ಪೂಜಾರಿ (50) ಎಂದು ಹತ್ಯೆಗೊಳಗಾದವರು. ಬೆಳ್ತಂಗಡಿ ತಾಲೂಕು ನಾಡ ನಿವಾಸಿ ಪರೀಕ್ಷಿತ್​(44) ಬಂಧಿತ ಆರೋಪಿ.

ಆರೋಪಿ ಪರೀಕ್ಷಿತ್​ ಮಂಗಳೂರಿನಲ್ಲಿ ಬಸ್​ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿಕೊಂಡಿದ್ದಾನೆ. ನವೀನ್​ ಪೂಜಾರಿ ಪತ್ನಿ ಮತ್ತು ಮಕ್ಕಳು ಮಂಗಳೂರಿನಲ್ಲಿದ್ದು, ನಾಲೈದು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಾಗಿದ್ದಾನೆ. ಪರೀಕ್ಷಿತ್​ಗೆ ಪರಿಚಯ ಇರುವ ಮಹಿಳೆ ಜೊತೆ ನವೀನ್​ ಪೂಜಾರಿ ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಇದು ಪರೀಕ್ಷಿತ್​ ಇಷ್ಟವಿರಲಿಲ್ಲ. ಈ ವಿಚಾರದಲ್ಲಿ ಇಬ್ಬರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನವೀನ್​ ಪೂಜಾರಿಯನ್ನು ಪರೀಕ್ಷಿತ್​ ಕೊಲೆ ಮಾಡಿದ್ದಾನೆ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್​ ಅಧೀಕ್ಷಕ ಹರಿರಾಮ್​ ಶಂಕರ್​ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here