Wednesday, January 15, 2025
Homeರಾಜ್ಯಪ್ರಿಯಕರನ ಜೊತೆ ಸೇರಿ ಪತ್ನಿಯಿಂದ ಪತಿಯ ಹತ್ಯೆ: 3 ದಿನ ಪೆಟ್ರೋಲ್ ಹಾಕಿ ಶವ ಸುಟ್ಟಿದ್ದ...

ಪ್ರಿಯಕರನ ಜೊತೆ ಸೇರಿ ಪತ್ನಿಯಿಂದ ಪತಿಯ ಹತ್ಯೆ: 3 ದಿನ ಪೆಟ್ರೋಲ್ ಹಾಕಿ ಶವ ಸುಟ್ಟಿದ್ದ ಆರೋಪಿಗಳು

ಹಾಸನ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಕೊಲೆಗೈದ ಘಟನೆ ಅರಸೀಕೆರೆಯ ಹೊರ ವಲಯದ ತಿರುಪತಿ ಕ್ರಾಸ್ ಬಳಿ ನಡೆದಿದೆ.

ಮುಜಾಮಿಲ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತನ ಪತ್ನಿ ಹಾಗೂ ಆಕೆಯ ಪ್ರಿಯಕರ ಯಾಸೀನ್ ಕೊಲೆಗೈದ ಆರೋಪಿಗಳಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಮುಜಾಮಿಲ್ ಅಡ್ಡಿಯಾಗಿದ್ದಕ್ಕೆ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

ಕೊಲೆಯಾದ ಮುಜಾಮಿಲ್‍ನ ಪತ್ನಿ ಜೊತೆ ಯಾಸೀನ್ ಅಕ್ರಮ ಸಂಬಂಧ ಹೊಂದಿದ್ದ. ಇದೇ ವಿಚಾರಕ್ಕೆ ಪತ್ನಿ ಜೊತೆ ಮುಜಾಮಿಲ್ ಜಗಳವಾಡುತ್ತಿದ್ದ. ಇದರಿಂದ ಆತನ ಕೊಲೆಗೆ ಸ್ಕೆಚ್ ಹಾಕಿದ್ದ ಪತ್ನಿ ಹಾಗೂ ಯಾಸೀನ್ ಡಿ.15ರಂದು ಮದ್ಯ ಸೇವಿಸಿದ್ದ ಮುಜಾಮಿಲ್‍ನನ್ನು ನಗರದ ಹೊರ ವಲಯಕ್ಕೆ ಕರೆದೊಯ್ದು ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿದ್ದರು. ಬಳಿಕ ಶವವನ್ನು ಚರಂಡಿಗೆ ಹಾಕಿ ಮೂರು ದಿನಗಳ ಕಾಲ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಅಲ್ಲದೆ, ಹೊಗೆ ಬರದಂತೆ ಗುಜರಿ ಅಂಗಡಿಯಿಂದ ಕಬ್ಬಿಣದ ವಸ್ತುಗಳನ್ನು ತಂದು ಚರಂಡಿ ಮುಚ್ಚಿದ್ದರು.

ಎರಡು ದಿನಗಳ ನಂತರ ಆರೋಪಿ ಮಹಿಳೆ ಹಾಗೂ ಆಕೆಯ ಪುತ್ರ ಜಾಹೀದ್ ಖಾನ್ ಪೊಲೀಸ್ ಠಾಣೆಗೆ ತೆರಳಿ ಮುಜಾಮಿಲ್ ಕಾಣೆಯಾಗಿದ್ದ ಬಗ್ಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಸುಟ್ಟ ಸ್ಥಿತಿಯಲ್ಲಿದ್ದ ಮುಜಾಮಿಲ್ ಶವವನ್ನು ಪತ್ತೆ ಹಚ್ಚಿದ್ದರು. ಬಳಿಕ ಆರೋಪಿಯನ್ನು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

ಈ ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular