ದಾವಣಗೆರೆ: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯನ್ನೇ ಹತ್ಯೆಗೈದಿದ್ದ ನಾಲ್ವರು ಆರೋಪಿಗಳನ್ನು ಪ್ರಕರಣ ನಡೆದ 24 ಗಂಟೆಗಳಲ್ಲೇ ದಾವಣಗೆರೆಯ ಅಜಾದ್ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಬೂಬಜಾರ್‌ನ ಗಣೇಶ್ (24), ಹರಳಯ್ಯ ನಗರದ ಅನಿಲ್ (18) ಹಳೆ ಚಿಕ್ಕನಹಳ್ಳಿಯ ಶಿವಕುಮಾರ್ (25) ಮತ್ತು ಭಾರತ್ ಕಾಲೋನಿಯ ಮಾರುತಿ (24) ಎಂದು ಗುರುತಿಸಲಾಗಿದೆ. ಆರೋಪಿಗಳು ದಾವಣಗೆರೆ ಜಿಲ್ಲೆಯ ಇಮಾಂ ನಗರದ ಹಣ್ಣಿನ ವ್ಯಾಪಾರಿ ದುಗ್ಗೇಶಿ ಎಂಬಾತನನ್ನು ಕೊಲೆಗೈದಿದ್ದರು.