ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಸವನಗುಡಿಯ ಗೌರಮ್ಮ ಮೃತ ಮಹಿಳೆ. ಪಾದಯಾತ್ರೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಗೌರಮ್ಮಗೆ ಹೃದಯಾಘಾತವಾಗಿ, ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.
ಸಮಾರಂಭದ ಭಾಷಣದ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ತೆರಳಿ ಅಂತಿಮ ದರ್ಶನ ಪಡೆದಿದ್ದಾರೆ.