ವರದಿ ರಾಯಿ ರಾಜ ಕುಮಾರ

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಉಪ ನಿರ್ದೇಶಕರ ಕಛೇರಿ, ಕಾರ್ಕಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕಾರ್ಕಳ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ನಲ್ಲಿ ಮೈಸೂರು ವಿಭಾಗ ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಯೋಗಾಸನ ಸ್ಪರ್ಧೆ ನಡೆಯುತ್ತಿದೆ.

ಅಕ್ಟೋಬರ್ 10ರಂದು ನಡೆಯುತ್ತಿರುವ ಈ ಸ್ಪರ್ಧೆಗಳಲ್ಲಿ ಎಂಟು ಜಿಲ್ಲೆಗಳ ಒಟ್ಟು 192 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.


ಸ್ಪರ್ಧೆಗಳನ್ನು ರಾಜ್ಯ ಶಿಕ್ಷಕ ಪ್ರಶಸ್ತಿ ವಿಜೇತರಾದ ಕಾರ್ಕಳ ನರೇಂದ್ರ ಕಾಮತ್ ಮತ್ತು ತಂಡದವರು ನಡೆಸಿಕೊಡುತ್ತಿದ್ದಾರೆ.
ಅಕ್ಟೋಬರ್ ಒಂಬತ್ತರಂದು ಸಂಜೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನಡೆಸಿ ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು.

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗಾಸನವು ಶಾರೀರಿಕ ಹಾಗೂ ಮಾನಸಿಕ ಉತ್ತಮ ಆರೋಗ್ಯವನ್ನು ನೀಡುತ್ತದೆ, ವಿದ್ಯಾರ್ಥಿಗಳು ಹೆಚ್ಚು ಯೋಗಾಸನದಲ್ಲಿ ಪ್ರಾವೀಣ್ಯತೆಯನ್ನು ಪಡೆಯಬೇಕು ಎಂದು ತಿಳಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಕರಾವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ ಗಪೂರ್, ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಉಪ ನಿರ್ದೇಶಕ ಲೋಕೇಶ್ ಸಿ, ಡಯಟ್ ಪ್ರಾಂಶುಪಾಲ ಅಶೋಕ ಡಿ, ದೈಹಿಕ ಶಿಕ್ಷಣ ಸಂಘದ ರಾಜ್ಯ ಉಪಾಧ್ಯಕ್ಷ ರಾಜಾರಾಮ್, ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ರಾಜೇಶ್ವರಿ ಎಜುಕೇಶನ್ ಪೌಂಡೇಶನ್ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವಿಚಂದ್ರ ಕಾರಂತ, ನಿತ್ಯಾನಂದ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲ ಸಚಿನ್ ಕೆಎನ್, ಕುಸುಮಾಕರ ಶೆಟ್ಟಿ, ವಿಜಯ್ ಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಹಾಜರಿದ್ದರು.

ಪ್ರಾಂಶುಪಾಲ ಸಚಿನ್ ಕೆ ಎನ್ ಸ್ವಾಗತಿಸಿದರು. ಉಪನ್ಯಾಸಕಿ ಉಷಾ ಅಂಬರೀಶ್ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಣೀಲ್ ಹೆಗ್ಡೆ ವಂದಿಸಿದರು.
.

