
14 ಮತ್ತು 17ರ ವಯೋಮಾನದ ಬಾಲಕ–ಬಾಲಕಿಯರ ಹೊನಲು ಬೆಳಕಿನ ಕ್ರೀಡಾಕೂಟಕ್ಕೆ ಸಿದ್ಧತೆ
ಹೆಬ್ರಿ: ವಿದ್ಯಾಂಗ ಉಪನಿರ್ದೆಶಕ ಕಛೇರಿ,ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಕುಂದಾಪುರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ವೆ, ಹೆಬ್ರಿ ತಾಲೂಕು ಇವರ ಸಹಕಾರದೊಂದಿಗೆ ಮೈಸೂರು ವಿಭಾಗ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ–ಬಾಲಕಿಯರ ವಾಲಿಬಾಲ್ ಪಂದ್ಯಾಟ ಅಕ್ಟೋಬರ್ 13 ಮತ್ತು 14ರಂದು ನಡೆಯಲಿದೆ.
ವಿದ್ಯಾಂಗ ಉಪನಿರ್ದೇಶಕರ ಕಚೇರಿ, ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳ್ವೆ ಇವರ ಸಹಯೋಗದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗಿದೆ. ಬೆಳ್ಳೆಯ ದಿ. ಬೆಳ್ವೆ ಪಟೇಲ್ ತೇಜಪ್ಪ ಶೆಟ್ಟಿ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ.
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವುದು, ದೈಹಿಕ ಸಾಮರ್ಥ್ಯ ಹಾಗೂ ಶಿಸ್ತು ಬೆಳೆಸುವುದು ಮತ್ತು ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಒದಗಿಸುವುದು ಇಂತಹ ಕ್ರೀಡಾಕೂಟಗಳ ಪ್ರಮುಖ ಉದ್ದೇಶವಾಗಿದೆ. ವಿಭಾಗ ಮಟ್ಟದ ಈ ಪಂದ್ಯಾಟದಲ್ಲಿ ವಿವಿಧ ತಂಡಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ.
ಪಂದ್ಯಾಟದ ಯಶಸ್ಸಿಗೆ ಸಂಘಟನಾ ಸಮಿತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಶುಭ ಹಾರೈಸಿದ್ದಾರೆ.
