ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್(ರಿ.) : ಅಂಬಲಪಾಡಿಯಲ್ಲಿ ‘ಉಚಿತ ಅರೋಗ್ಯ ತಪಾಸಣಾ ಶಿಬಿರ

0
5

ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್(ರಿ.), ಬಂಕೇರಕಟ್ಟ, ಅಂಬಲಪಾಡಿ ಇದರ ಆಶ್ರಯದಲ್ಲಿ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಸಹಯೋಗದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ನುರಿತ ವೈದ್ಯರಿಂದ ‘ಉಚಿತ ಅರೋಗ್ಯ ತಪಾಸಣಾ ಶಿಬಿರ’ವು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.

ಮುಂಬೈ ಉದ್ಯಮಿ ಪಠೇಲರ ಮನೆ ಭರತ್ ಶೆಟ್ಟಿ ಅಂಬಲಪಾಡಿ ಅವರು ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಉದ್ಯಮಿ ಹಾಗೂ ಮಲ್ಪೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಅವರು ವೈದ್ಯಕೀಯ ತಂಡದ ಸದಸ್ಯರನ್ನು ಗೌರವಿಸಿ ಮಾತನಾಡಿ, ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಅರೋಗ್ಯ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ. ಉಚಿತ ಅರೋಗ್ಯ ತಪಾಸಣಾ ಶಿಬಿರಗಳ ಮೂಲಕ ಮನೆ ಬಾಗಿಲಿಗೆ ವೈದ್ಯಕೀಯ ಸೇವಾ ಸೌಲಭ್ಯಗಳು ಬಂದಾಗ ಎಲ್ಲರೂ ಅದರ ಸದುಪಯೋಗ ಪಡೆಯುವುದು ಇಂದಿನ ಅಗತ್ಯತೆ ಎಂದರು.

ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್(ರಿ.) ಅಧ್ಯಕ್ಷ ಕಾರ್ತಿಕ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವದಾಸ್ ಪಿ. ಮಾತನಾಡಿ ಅರೋಗ್ಯ ತಪಾಸಣಾ ಶಿಬಿರದ ಯಶಸ್ಸಿಗೆ ಕೈಜೋಡಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ವೈದ್ಯಕೀಯ ತಂಡದ ಡಾ! ಸುಮಂತ್, ಅರೋಗ್ಯ ತಪಾಸಣಾ ಶಿಬಿರದ ಮೇಲ್ವಿಚಾರಕ ದಿನೇಶ್, ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರೂಪೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ನವೀನ್ ಸುವರ್ಣ, ಬಿಲ್ಲವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಮಹಿಳಾ ಘಟಕದ ಸಂಚಾಲಕಿ ಗೋಧಾವರಿ ಎಮ್. ಸುವರ್ಣ ಹಾಗೂ ಎರಡೂ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಅಶ್ವಿನಿ ಪ್ರಾರ್ಥನೆ ಹಾಡಿದರು. ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್ ಗೌರವಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಿಕಟಪೂರ್ವ ಅಧ್ಯಕ್ಷ ಕಿರಣ್ ಪೂಜಾರಿ ವಂದಿಸಿದರು. ಅಶ್ವಥ್ ಪೂಜಾರಿ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು.

ನೂರಕ್ಕೂ ಅಧಿಕ ಶಿಬಿರಾರ್ಥಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.