ಡಾ. ಶಿರೂರು ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ: ರೇಖಾ ಶಿವರಾಮ ಭಟ್

0
9

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರಿಗೆ ಕರುನಾಡ ಕಲ್ಪವೃಕ್ಷ ಪ್ರತಿಷ್ಠಾನ ಕರ್ನಾಟಕ ಇದರ ವತಿಯಿಂದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಅಕ್ಟೋಬರ್ 25ರಂದು ಬೆಂಗಳೂರಿನ ಅತ್ತಿಬೆಲೆ ಕಲ್ಯಾಣ ಮಂಟಪದಲ್ಲಿ ನಡೆಯುವ ಕಲ್ಪವೃಕ್ಷ ಸಾಹಿತ್ಯೋತ್ಸವ ಸಮಾರಂಭದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕರುನಾಡ ಕಲ್ಪವೃಕ್ಷ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ರೇಖಾ ಶಿವರಾಮ ಭಟ್ ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಸರೋಜಿನಿ ಶಾನುಭೋಗ ಅವರ ಪುತ್ರ. ಇವರು ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಡಾ. ಶಿರೂರು ಅವರು ಭಾಷಾ ಶಿಕ್ಷಕರಾಗಿ, ಸಾಹಿತ್ಯ ಸಂಘಟಕರಾಗಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು, ಜಿಲ್ಲೆ ಮತ್ತು ರಾಜ್ಯದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ತಾಲೂಕು ಶಿಕ್ಷಕ ದಿನಾಚರಣಾ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಸ್ಮರಣೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಅವರ ಸೇವೆ ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು ಕರ್ನಾಟಕ ರಾಜ್ಯ ಕಲ್ಪವೃಕ್ಷ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಕನಕ ಪ್ರೀತೇಶ್ ಮತ್ತುಅಧ್ಯಕ್ಷರಾದ ರೇಖಾ ಶಿವರಾಮ ಭಟ್ ಅವರು ಡಾ.ಶಿರೂರು ಅವರಿಗೆ ಅಭಿನಂದನೆಸಲ್ಲಿಸಿದ್ದಾರೆ.