ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

0
49

ಮೂಡುಬಿದಿರೆ: ಬೆಂಗಳೂರನ್ನು ಯೋಜನಾಬದ್ಧವಾಗಿ ಅಭಿವೃದ್ಧಿ ಪಡಿಸಿದ ಕೆಂಪೇಗೌಡರು ನಾಡಪ್ರಭು ಎಂದೇ ಪ್ರಸಿದ್ಧರು. ನಮ್ಮ ರಾಜ್ಯದ ಇತರ ನಗರಗಳ ಅಭಿವೃದ್ಧಿಗೆ ಮಾದರಿಯಾಗಿದೆ ಬೆಂಗಳೂರು. ಕರ್ನಾಟಕದ ಗ್ರಾಮಗ್ರಾಮಗಳಿಂದ ದೇಶವಿದೇಶಗಳಿಂದ ಉದ್ಯಮಿಗಳನ್ನು ಉದ್ಯೋಗಾರ್ಥಿಗಳನ್ನು ತನ್ನೆಡೆಗೆ ಸೆಳೆಯುವ ಮೂಲಕ ನಿಜಕ್ಕೂ ಬೆಂಗಳೂರು ಮಾದರಿ ನಗರವಾಗಿದೆ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಹೇಳಿದರು.
ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜಕ್ಕಾಗಿ ನಾವೇನಾದರೂ ಮಾಡಬೇಕು ಎಂಬುದಕ್ಕೆ ಕೆಂಪೇಗೌಡರು ಮಾದರಿಯಾಗಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶೀಲ್ದಾರ್ ಶ್ರೀಧರ ಮುಂದಲಮನಿ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಆಡಳಿತ ಶೈಲಿ ನಮಗೆಲ್ಲರಿಗೂ ಮಾದರಿಯಾಗಲಿ, ಮಾಜಿ ಸಚಿವರಾಗಿದ್ದರೂ ಊರ ಅಭಿಪ್ರಗತಿ ಬಗ್ಗೆ ಕಾಳಜಿ ಹೊಂದಿರುವ ಅಭಯಚಂದ್ರರಂಥ ಹಿರಿಯರ ಮಾರ್ಗದರ್ಶನ ಸದಾ ನಮಗೆ ಒದಗಿ ಬರಲಿ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ತಾಲೂಕು ಸಮಿತಿ ಅಧ್ಯಕ್ಷ ಅರುಣ್‌ಕುಮಾರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಮುಖ್ಯಅತಿಥಿಗಳಾಗಿದ್ದರು.
ಕೆಂಪೇಗೌಡ ಜಯಂತಿಯ ಅಂಗವಾಗಿ ತಾಲೂಕು ಮಟ್ಟದ ಶ್ರೀ ನಾಡಪ್ರಭು ಕೆಂಪೇಗೌಡ ಪ್ರಬಂಧ ಸ್ಪರ್ಧೆ ಏರ್ಪಾಡಿಸಲಾಗಿತ್ತು ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಸಮರ್ಥ ಚಂದ್ರಗೌಡ ನಾಗನಗೌಡ್ರ ಪ್ರಥಮ, ಕೆಪಿಎಸ್ ಪ್ರೌಢಶಾಲೆ ಮಿಜಾರು ಇಲ್ಲಿನ ಕ್ಷಮಿತಾ ದ್ಬಿತೀಯ, ಮೂಡುಬಿದಿರೆ ಜೈನ ಪ್ರೌಢಶಾಲೆಯ ಆಕಾಂಕ್ಷ ಎಚ್. ಆಚಾರ್ಯ ತೃತೀಯ ಹಾಗೂ ಸರಕಾರಿ ಪ್ರೌಢಶಾಲೆ ಪ್ರಾಂತ್ಯ ಇಲ್ಲಿನ ಸಂಗಮೇಶ ಶಿವಪ್ಪ ಗೂಳಿ ಇವರು ಸಮಾಧಾನಕರ ಬಹುಮಾನ ಗೆದ್ದಿದ್ದು ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here