ಮುಲ್ಕಿ: ಸಮೀಪದ ಒಡೆಯರಬೆಟ್ಟು ಪುತ್ರನ್ ಮೂಲ ಸ್ಥಾನ ಬಳಿಯ ನಿವಾಸಿ ನಡಿಕುದ್ರು ಸೋಮಸುಂದರ್ ಅಂಚನ್ (80) ಅನಾರೋಗ್ಯದಿಂದ ನಿಧನರಾದರು ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಮುಂಬೈನಲ್ಲಿ ಶಿಪ್ಪಿಂಗ್ ಕಂಪನಿಯೊಂದರಲ್ಲಿ ಎಲೆಕ್ಟ್ರಿಕ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಹೆಜಮಾಡಿ ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನದ ಒಂದನೇ ಗುರಿಕಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಮುಲ್ಕಿಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಸದಸ್ಯರಾಗಿ, ವಿವಿಧ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿ, ಸೇವೆ ಸಲ್ಲಿಸಿ ಕೊಡುಗೈದಾನಿಯಾಗಿ ಜನಾನುರಾಗಿಯಾಗಿದ್ದರು ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯರಾದ ಪುತ್ತುಭಾವ, ಹರ್ಷರಾಜ ಶೆಟ್ಟಿ, ದಯಾವತಿ ಅಂಚನ್, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬರ್ನಾಡ್, ಡಿಸಿಸಿ ಸದಸ್ಯ ಧನಂಜಯ ಮಟ್ಟು, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷರಾದ ಗೋಪಿನಾಥ ಪಡಂಗ, ರಮೇಶ್ ಅಮೀನ್, ಡಾ. ಹರಿಶ್ಚಂದ್ರ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಹೆಜಮಾಡಿಬಿಲ್ಲವ ಸಂಘದ ಅಧ್ಯಕ್ಷ ಮೋಹನದಾಸ್, ಶಿವರಾಮ್ ಜಿ ಅಮೀನ್, ವಾಮನ್ ನಡಿಕುದ್ರು, ಕಿಶೋರ್ ಸಾಲ್ಯಾನ್ ಬಿರುವೆರ್ ಕುಡ್ಲ ,ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ಗೌರವಾಧ್ಯಕ್ಷ ವೆಂಕಟೇಶ ಹೆಬ್ಬಾರ್, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಪ್ರಾಣೇಶ್ ಹೆಜ್ಮಾಡಿ, ಉದಯಕುಮಾರ್ ಶೆಟ್ಟಿ ಅಧಿಧನ್, ಶರತ್ ಕಾರ್ನಾಡ್, ಹೆಜಮಾಡಿ ಶ್ರೀ ಧರ್ಮ ಜಾರಂದಾಯ ದೇವಸ್ಥಾನದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.