ತಾರಾನಾಥ್ ರೈ ಬದಿಯಡ್ಕ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ಪ್ರಶಸ್ತಿ–2026’

0
17

ಕಾಸರಗೋಡು : ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ತಾರಾನಾಥ್ ರೈ ಬದಿಯಡ್ಕ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ಪ್ರಶಸ್ತಿ–2026’ ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವದ ಆಯೋಜಕರು ತಿಳಿಸಿದ್ದಾರೆ.

ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಪ್ರಾಯೋಜಕತ್ವದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡಿನ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ–ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ ನಡೆಯಲಿದೆ.

ಅಕ್ಟೋಬರ್ 18ರಂದು ಬೆಳಿಗ್ಗೆ 11 ಗಂಟೆಗೆ ಶ್ರೀನಿವಾಸ್ ಬಹದ್ದೋರ್ ಅವರ ಸರ್ವಾಧ್ಯಕ್ಷತೆಯಲ್ಲಿ ‘ಕಾಸರಗೋಡು ದಸರಾ ರಾಷ್ಟ್ರೀಯ ಕವಿ ಸಮ್ಮೇಳನ’ ನಡೆಯಲಿದೆ. ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ, ಚುಟುಕು ಯುಗಾಚಾರ್ಯ ಡಾ. ಎಂ.ಜಿ.ಆರ್. ಅರಸ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮೇರು ಕವಿ, ಸಾಹಿತಿ ಹಾಗೂ ಸಂಘಟಕ ಡಾ. ಜಯಪ್ಪ ಹೊನ್ನಾಳಿ, ಮೈಸೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕವಿಗೋಷ್ಠಿ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ತಾರಾನಾಥ್ ರೈ ಬದಿಯಡ್ಕ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ಪ್ರಶಸ್ತಿ–2026’ ಪ್ರದಾನ ಮಾಡಲಾಗುವುದು.

ಈ ಕುರಿತು ಕಾಸರಗೋಡು ದಸರಾ ಪ್ರಧಾನ ಸಂಚಾಲಕ ಡಾ. ವಾಮನ್ ರಾವ್ ಬೇಕಲ್ ಹಾಗೂ ಪಾಂಗೋಡು ಕ್ಷೇತ್ರ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯಕ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.