ಡಾ. ಶರಣಪ್ಪ ಗಬ್ಬೂರು ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’

0
9

ಬೆಂಗಳೂರು : ಸಾಹಿತಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೆ.ಆರ್.ಪುರಂ, ಬೆಂಗಳೂರು ಇಲ್ಲಿನ ಪ್ರಾಧ್ಯಾಪಕರಾದ ಡಾ. ಶರಣಪ್ಪ ಗಬ್ಬೂರು (ಕೋಲಾರ) ಅವರನ್ನು **ಕನ್ನಡ ಭವನ ನೀಡುವ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026″**ಗೆ ಆಯ್ಕೆ ಮಾಡಲಾಗಿದೆ.

ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಡಾ. ಶರಣಪ್ಪ ಗಬ್ಬೂರು ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಗಡಿನಾಡು ಕನ್ನಡ ಸಮ್ಮೇಳನದ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದ ಅಂಗವಾಗಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.