ನಡೂರು : ಶ್ರೀವಾಣಿ ಪ್ರೌಢಶಾಲೆಗೆ ಶೇ.100 ಫಲಿತಾಂಶ : 53ರಲ್ಲಿ 53 ವಿದ್ಯಾರ್ಥಿಗಳು ಉತ್ತೀರ್ಣ

0
8

ನಡೂರು, ಏಪ್ರಿಲ್ 23: ರಜತಾದ್ರಿಯಲ್ಲಿರುವ ಶ್ರೀವಾಣಿ ಪ್ರೌಢಶಾಲೆ 2026ರ ಮಾರ್ಚ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಸಾಧಿಸಿ ಮತ್ತೊಮ್ಮೆ ತನ್ನ ಶೈಕ್ಷಣಿಕ ಸಾಧನೆಯನ್ನು ಮೆರೆದಿದೆ.

ಈ ಬಾರಿ ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ 53 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಹಿಂದಿನ ವರ್ಷಗಳ ಸಾಧನೆಯನ್ನು ಮುಂದುವರಿಸುತ್ತಾ ಈ ಬಾರಿಯೂ ಶತಪ್ರತಿಶತ ಫಲಿತಾಂಶ ದಾಖಲಿಸಿರುವುದು ಶಾಲೆಗೆ ಹೆಮ್ಮೆಯ ವಿಷಯವಾಗಿದೆ.

ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರ ಸಹಕಾರ ಮತ್ತು ವಿದ್ಯಾರ್ಥಿಗಳ ಪರಿಶ್ರಮ ಈ ಸಾಧನೆಯ ಪ್ರಮುಖ ಕಾರಣವೆಂದು ತಿಳಿಸಲಾಗಿದೆ. ಶಾಲೆಯ ನಿರಂತರ ಶೈಕ್ಷಣಿಕ ಗುಣಮಟ್ಟ ಮತ್ತು ಶಿಸ್ತು ಈ ಯಶಸ್ಸಿನ ಹಿಂದಿನ ಬಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸಾಧನೆಗೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಅಭಿನಂದನೆಗಳನ್ನು ತಿಳಿಸಿರುವ ಶಾಲಾ ಆಡಳಿತ, ಮುಂದೆಯೂ ಇದೇ ರೀತಿಯ ಬೆಂಬಲ ಮತ್ತು ಆಶೀರ್ವಾದ ದೊರಕಲಿ ಎಂದು ಮನವಿ ಮಾಡಿಕೊಂಡಿದೆ.

LEAVE A REPLY

Please enter your comment!
Please enter your name here