ಕುಲಾಲರ ಸಾಲ್ಯಾನ್ ಕುಟುಂಬದ ಅದಿಮೂಲ ನಾಗದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಹಾಗೂ ಸಿಂಹ ಸಂಕ್ರಮಣ

0
48

ಮಂಗಳೂರು : ಕುಲಾಲರ ಸಾಲ್ಯಾನ್ ಕುಟುಂಬದ ಅದಿಮೂಲ ಶ್ರೀ ನಾಗದೇವರು, ನಾಗಬ್ರಹ್ಮ, ರಕ್ತೇಶ್ವರಿ, ನಂದಿಕೋಣ, ಕ್ಷೇತ್ರಪಾಲ ಹಾಗೂ ಮಲರಾಯ ಸಾನಿಧ್ಯ ಪಿಲಿಕೂರು ನಾಗ ಬ್ರಹ್ಮ ಸನ್ನಿಧಿಯಲ್ಲಿ ನಾಗರ ಪಂಚಮಿ ಹಾಗೂ ಸಿಂಹ ಸಂಕ್ರಮಣ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಸೇವೆಗಳು ನಡೆಯಲಿದ್ದು, ನಾಗದೇವರ ಆರಾಧನೆಗೆ ವಿಶೇಷ ಮಹತ್ವ ನೀಡಲಾಯಿತು. ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ ಸಲ್ಲಿಸುವುದು ತುಳುನಾಡಿನ ಪ್ರಮುಖ ಧಾರ್ಮಿಕ ಸಂಪ್ರದಾಯಗಳಲ್ಲಿ ಒಂದಾಗಿದ್ದು, ಭಕ್ತರು ಶ್ರದ್ಧಾಭಕ್ತಿಯಿಂದ ಸೇವಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಬೆಳಗ್ಗೆ 10 ಗಂಟೆಗೆ ಕ್ಷೀರಾಭಿಷೇಕ ಹಾಗೂ ಸೀಯಾಳ ಅಭಿಷೇಕ ನೆರವೇರಿತು. ಮಧ್ಯಾಹ್ನ 12.30ಕ್ಕೆ ಕುಂಕುಮಾರ್ಚನೆ, ಪಂಚಾಮೃತಾಭಿಷೇಕ ಹಾಗೂ ತಂಬಿಲ ಸೇವೆ ನಡೆಯಿತು. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ಜರುಗಿತು. ಬಳಿಕ ಮಧ್ಯಾಹ್ನ 1.30ಕ್ಕೆ ಅನ್ನಪ್ರಸಾದ ವಿತರಣೆ ನಡೆಯಿತು.