ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಆಟಿಡೊಂಜಿ ದಿನ

0
37

ರಾಜ್ಯ ಅತ್ಯುತ್ತಮ ಯುವಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ 26ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ ಭಾನುವಾರ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮವನ್ನು ಬೆಳ್ಮಣ್ಣು ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾದ ಬಿ.ಎಚ್. ಶಿವರಾಮ ಆಚಾರ್ಯರವರು ಉದ್ಘಾಟಿಸಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನಡೆಸುತ್ತಿರುವ ಸಮಾಜಮುಖಿ ಸೇವೆ ನಿಜವಾಗಿಯೂ ನಿಸ್ವಾರ್ಥ ಹಾಗೂ ಪ್ರಾಮಾಣಿಕತೆಯಿಂದ ಕೂಡಿದೆ ಎಂದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಸುರೇಶ ಅಬ್ಬನಡ್ಕ ಅಧ್ಯಕ್ಷತೆ ವಹಿಸಿದ್ದರು.

ಖ್ಯಾತ ರಂಗಭೂಮಿ ಕಲಾವಿದರಾದ ಪರಪಾಡಿ ಪ್ರಶಾಂತ್ ಶೆಟ್ಟಿ ಅವರು ಮಾತನಾಡಿ ತುಳು ಸಂಸ್ಕೃತಿಯ ಭಾಗವಾದ ಆಟಿ ಆಚರಣೆಯಲ್ಲಿ ಸಾಂಸ್ಕೃತಿಕ ಮೌಲ್ಯಗಳು, ಆರೋಗ್ಯದಾಯಕ ಅಂಶಗಳು ತುಂಬಿವೆ. ತುಳು ನಾಡಿನ ಇಂಥ ವೈಶಿಷ್ಟ್ಯಗಳನ್ನು ಪಾಲಿಸುವುದು ನಮ್ಮ ಕರ್ತವ್ಯ ಎಂದರು.

ಬೆಳ್ಮಣ್ಣು ಜೆಸಿಐನ ಅಧ್ಯಕ್ಷರಾದ ವೀರೇಂದ್ರ ಆರ್. ಕೆ., ನಂದಡಿಕೆ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತರಾದ ವಿಶಾಲಾಕ್ಷಿ ಪೂಜಾರಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಗೀತ ಕಲಾವಿದರಾದ ನಮಿತಾ ಬೋಳ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಮಾರಂಭದ ವೇದಿಕೆಯಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷರಾದ ದಿನೇಶ್ ಪೂಜಾರಿ ಬೀರೂಟ್ಟು, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಕೆಮ್ಮಣ್ಣು ಉಪಸ್ಥಿತರಿದ್ದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ವೀಣಾ ಪೂಜಾರಿ ವರದಿ ವಾಚಿಸಿದರು. ಮಾಜಿ ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಮಾಜಿ ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಮಾಜಿ ಜೊತೆ ಕಾರ್ಯದರ್ಶಿ , ಅನ್ನಪೂರ್ಣ ಕಾಮತ್, ಸದಸ್ಯರಾದ ಹರಿಣಿ ಪೂಜಾರಿ, ವೀಣಾ ಆಚಾರ್ಯ ಅತಿಥಿಗಳ ಪರಿಚಯ ವಾಚಿಸಿದರು. ಸಂಘದ ಕಾರ್ಯದರ್ಶಿ ಸತೀಶ್ ಅಬ್ಬನಡ್ಕ ವಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಮಾಜಿ ಉಪಾಧ್ಯಕ್ಷರಾದ ಬಾಲಕೃಷ್ಣ ಮಡಿವಾಳ, ಅಬ್ಬನಡ್ಕ ಗಣೇಶೋತ್ಸವ ಸಮಿತಿಯ ಪೂರ್ವಾಧ್ಯಕ್ಷರಾದ ಹರೀಶ್ ಪೂಜಾರಿ, ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸುಭಾಷ್ ಕೆಮ್ಮಣ್ಣು, ಮಾಜಿ ಕಾರ್ಯದರ್ಶಿ ಲಲಿತಾ ಆಚಾರ್ಯ, ಮಾಜಿ ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪ ಕುಲಾಲ್, ಅಬ್ಬನಡ್ಕ ಚೆಂಡೆ ಬಳಗದ ನಿರ್ದೇಶಕರಾದ ಯೋಗೀಶ್ ಆಚಾರ್ಯ, ಸದಸ್ಯರಾದ ಶಾಂತರಾಮ್ ಕುಲಾಲ್, ಶ್ರೀಕಾಂತ್ ಆಚಾರ್ಯ, ಅವಿನಾಶ್ ಪೂಜಾರಿ ಮೊದಲದವರಿದ್ದರು