ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಭಾರತದ ಪ್ರಥಮ ಪ್ರಧಾನ ಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರುರವರ ಜನ್ಮದಿನಾಚರಣೆ

0
8

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ವಿಜೇತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಹಯೋಗದಲ್ಲಿ ಭಾರತದ ಪ್ರಥಮ ಪ್ರಧಾನ ಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರುರವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅವರು ಪಂಡಿತ್ ಜವಾಹರ್ ಲಾಲ್ ನೆಹರುರವರ ಭಾವಚಿತ್ರ ಮಾಲಾರ್ಪಣೆಗೈದು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಿದರು.

ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿ ಭಾರತದಲ್ಲಿ ಪ್ರತಿ ವರ್ಷ ನವೆಂಬರ್ 14 ರಂದು ಆಚರಿಸಲಾಗುವ ಮಕ್ಕಳ ದಿನಾಚರಣೆಗೆ ವಿಶೇಷ ಮಹತ್ವವಿದೆ. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನೇ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಮೊದಲ ಪ್ರಧಾನಿಗೆ ಪ್ರೀತಿಯಿಂದ ‘ಚಾಚಾ ನೆಹರು’ ಎಂದು ಕರೆಯಲಾಗುತ್ತಿತ್ತು. ಮಕ್ಕಳ ಮೇಲಿನ ಅತೀವ ಪ್ರೀತಿ, ಅವರ ಹಕ್ಕುಗಳು ಮತ್ತು ಶಿಕ್ಷಣಕ್ಕಾಗಿ ಅವರ ಅಚಲವಾದ ಸಮರ್ಥನೆಯಿಂದಾಗಿ ಈ ಚಾಚಾ ನೆಹರು ಬಿರುದು ಅವರಿಗೆ ಬಂದೊದಗಿತ್ತು. ಸವಾಲುಗಳನ್ನು ಎದುರಿಸಲು ಮತ್ತು ಯುವ ಪೀಳಿಗೆಗೆ ಉಜ್ವಲ ಭವಿಷ್ಯಕ್ಕೆ ಕೊಡುಗೆ ನೀಡಲು ವ್ಯಕ್ತಿಗಳು, ಸಮುದಾಯಗಳು ಮತ್ತು ಸರ್ಕಾರಗಳು ಒಗ್ಗೂಡಬೇಕೆಂಬುದು ಈ ಮಕ್ಕಳ ದಿನದ ಉದ್ದೇಶವಾಗಿದೆ. ಮಕ್ಕಳ ದಿನವನ್ನು ಪ್ರತಿ ವರ್ಷ ನವೆಂಬರ್ 14 ರಂದು ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಆಚರಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಸುಭಾಷ್ ಕುಮಾರ್, ಭಜನಾ ಮಂಡಳಿಯ ಗೌರವಾಧ್ಯಕ್ಷ ರಾಜೇಶ್ ಕೋಟ್ಯಾನ್, ಅಧ್ಯಕ್ಷೆ ಅಶ್ವಿನಿ ಬೋಳ, ಕಾರ್ಯದರ್ಶಿ ಹರ್ಷಲ್ ಪೂಜಾರಿ, ಸಂಘದ ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಪೂರ್ವಾಧ್ಯಕ್ಷ ಸುರೇಶ್ ಕಾಸರಬೈಲು, ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರದೀಪ್ ಸುವರ್ಣ, ಸಂಘದ ಮಾಜಿ ಕಾರ್ಯದರ್ಶಿಗಳಾದ ಲಲಿತಾ ಆಚಾರ್ಯ, ವೀಣಾ ಪೂಜಾರಿ ಸಂಘದ ಮಾಜಿ ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಭಜನಾ ಮಂಡಳಿಯ ಮಾಜಿ ಕಾರ್ಯದರ್ಶಿ ಶ್ರದ್ಧಾ ಪೂಜಾರಿ, ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.