ನಂದಳಿಕೆ : ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ 19ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮವು ವಿಜೃಂಭಣೆಯಿದ ಜರಗಿತು.
ಬೆಳಿಗ್ಗೆಯಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ, ಸಾರ್ವಜನಿಕ ಗಣ ಹೋಮ, ಕುಣಿತ ಭಜನಾ ಕಾರ್ಯಕ್ರಮ, ಚೆಂಡೆವಾದನ, ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.