ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಹಯೋಗದೊಂದಿಗೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಬಳಿ ಆದಿತ್ಯವಾರ ಲೀಗ್ ಮಾದರಿಯ “ಅಬ್ಬನಡ್ಕ ಕ್ರಿಕೆಟ್ ಟ್ರೋಫಿ – ೨೦೨೬” ಉದ್ಘಾಟನೆ ಜರಗಿತು. ಪಂದ್ಯಾಟದಲ್ಲಿ ಒಟ್ಟು ಆರು ತಂಡಗಳಿದ್ದು ಒಟ್ಟು ಹದಿನೆಂಟು ಸುತ್ತಿನ ಪಂದ್ಯಾಟ ನಡೆಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಅಬ್ಬನಡ್ಕ ಸುರೇಶ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದವರು ಸಂಘದ ಹಾಗೂ ಭಜನಾ ಮಂಡಳಿಯ ಸದಸ್ಯರಲ್ಲಿ ಒಗ್ಗಟ್ಟು ಮತ್ತು ಕ್ರೀಡಾ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಅಬ್ಬನಡ್ಕ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ ಎಂದರು.

ನAದಳಿಕೆ ಗ್ರಾಮ ಪಂಚಾಯತ್ ಸದಸ್ಯರಾದ ಸದಾನಂದ ಶೆಟ್ಟಿ ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದವರು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದರಿಂದ ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದರು.
ನAದಳಿಕೆ ಅಂಗನಾಡಿ ಕೇಂದ್ರದ ಪ್ರಭಾ ಶರ್ಮಾ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದವರು ಇಂದಿನ ಯುವ ಜನಾಂಗ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ತರಬೇತುದಾರರಾದ ರಾಜೇದ್ರ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತಿತರಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಕಾರ್ಯದರ್ಶಿ ಸತೀಶ್ ಅಬ್ಬನಡ್ಕ ಕಾರ್ಯಕ್ರಮ ನಿರೂಪಿಸಿದರು.

