ನಂದಳಿಕೆ: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ೨೫ನೇ ವರ್ಷದ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವಾರ್ಷಿಕೋತ್ಸವ ರಜತ ಸಂಭ್ರಮ ಮತ್ತು ೧೯ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವವು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ಅದ್ದೂರಿಯಾಗಿ ಜರಗಿತು.
ಬೆಳಿಗ್ಗೆ ಧಾರ್ಮಿಕ ಪೂಜಾ ಕಾರ್ಯಕ್ರಮ, ಗಣಹೋಮ ಪೂಜೆ, ಅಬ್ಬನಡ್ಕ ಚೆಂಡೆ ಬಳಗದವರಿಂದ ಚೆಂಡೆವಾದನ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯವರಿಂದ ಕುಣಿತ ಭಜನಾ ಕಾರ್ಯಕ್ರಮ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಮಧ್ಯಾಹ್ನ ನಂತರ ಚೌತಿದ ಗೊಬ್ಬು – ಗ್ರಾಮೀಣ ಕ್ರೀಡೋತ್ಸವ, ರಾತ್ರಿ ಸಭಾ ಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಅನ್ನಸಂತರ್ಪಣೆಯೊAದಿಗೆ ಸಮಾರಂಭ ಸಂಪನ್ನಗೊಂಡಿತು.
ಸಭಾ ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಅಬ್ಬನಡ್ಕ ಸೇವಾ ಯೋಜನಾ ಸಮಿತಿಯ ಅಧ್ಯಕ್ಷರು, ಯುವ ಉದ್ಯಮಿಗಳಾದ ಪ್ರೇಮ್ ಕುಲಾಲ್ ಇನ್ನಾ ಹಾಗೂ ಸಮಾಜ ಸೇವಕರಾದ ನಂದಳಿಕೆ ಐವನ್ ನೊರಾನ್ಹ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷರುಗಳಾದ ಪ್ರಕಾಶ್ ಆಚಾರ್ಯ, ರಘುವೀರ್ ಶೆಟ್ಟಿ, ಆನಂದ ಪೂಜಾರಿ, ಸತೀಶ್ ಅಬ್ಬನಡ್ಕ, ಉದಯ ಅಂಚನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಅಬ್ಬನಡ್ಕ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಮೊದಲಾವರಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಕಾರ್ಯಕ್ರಮ ನಿರೂಪಿಸಿದರು, ಅಬ್ಬನಡ್ಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸುರೇಶ್ ಕಾಸರಬೈಲು ಸ್ವಾಗತಿಸಿದರು, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.

