ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಆಚರಣೆ

0
43

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ವಿಜೇತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಅಬ್ಬನಡ್ಕದಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಆಚರಣೆ ಕಾರ್ಯಕ್ರಮ ನಡೆಸಲಾಯಿತು.

ಸಂಘದ ಮಹಿಳಾ ಸದಸ್ಯರು ಬಣ್ಣ ಬಣ್ಣದ ರಂಗೋಲಿ ಹಾಕಿ ನೂರಾರು ಹಣತೆ ದೀಪ ಬೆಳಗಿಸಿ, ಸಿಹಿತಿಂಡಿ ಹಂಚಿ ದೀಪಾವಳಿ ಹಬ್ಬವನ್ನು ಸಂಭ್ರಮಿಸಿದರು.

ಅಬ್ಬನಡ್ಕ ಚಂಡೆ ಬಳಗದವರಿಂದ ಚಂಡೆ ವಾದನ, ಸಂಘದ ಸದಸ್ಯರೆಲ್ಲರೂ ಸಾಂಪ್ರದಾಯಿಕ ಉಡುಗೆಯೊಂದಿಗೆ ಪರಿಸರ ಸ್ನೇಹಿ ಸುಡುಮದ್ದುಗಳ ಪ್ರದರ್ಶನದೊಂದಿಗೆ ಹಬ್ಬವನ್ನು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸುಭಾಷ್ ಕುಮಾರ್, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಜೊತೆ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಕೋಶಾಧಿಕಾರಿ ಶ್ರೀಕಾಂತ್ ಆಚಾರ್ಯ, ಪೂರ್ವಾಧ್ಯಕ್ಷರಾದ ಸುರೇಶ್ ಕಾಸರಬೈಲು, ಸತೀಶ್ ಅಬ್ಬನಡ್ಕ, ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷರಾದ ಅಶ್ವಿನಿ ಬೋಳ, ಸಂಘದ ಸದಸ್ಯರಾದ ಹರೀಶ್ ಪೂಜಾರಿ, ಕೀರ್ತನ್ ಪೂಜಾರಿ, ಯೋಗೀಶ್ ಆಚಾರ್ಯ, ಲೀಲಾ ಪೂಜಾರಿ, ಸಂಧ್ಯಾ ಶೆಟ್ಟಿ, ವೀಣಾ ಪೂಜಾರಿ, ಅನ್ನಪೂರ್ಣ ಕಾಮತ್, ತ್ರಿವೇಣಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.