ನಂದಳಿಕೆ : ಮೈ ಭಾರತ್, ಉಡುಪಿ ಮತ್ತು ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ನಮ್ಮ ದೇಶದ ಶ್ರೇಷ್ಠ ರಾಜನೀತಿ ತಜ್ಞ, ನ್ಯಾಯವಾದಿ, ಶಿಕ್ಷಣ ತಜ್ಞರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಉಡುಪಿ ಮೈಭಾರತ್ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ ಅವರ ಮಾರ್ಗದರ್ಶನದಂತೆ ಕಾರ್ಯಕ್ರಮ ನಡೆಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರು ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಜೇಸಿಐನ ನಿಯೋಜಿತ ರಾಷ್ಟ್ರೀಯ ತರಬೇತುದಾರರಾದ ಮೋಹನ್ ಕಲ್ಪತರು ತುಮಕೂರು ಅವರು ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸಿ, ಪುಷ್ಪರ್ಚನೆ ಸಲ್ಲಿಸಿ ಮಾತನಾಡಿದವರು ಶ್ಯಾಮ ಪ್ರಸಾದ್ ಮುಖರ್ಜಿ ಅವರು ಭಾರತದ ಏಕತೆ ಮತ್ತು ಪ್ರಗತಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಉನ್ನತ ಆದರ್ಶಗಳು ಲಕ್ಷಾಂತರ ಜನರಿಗೆ ಪ್ರೇರಕವಾಗಿವೆ ಎಂದು ಹೇಳಿದರು.
ಉದ್ಯಮಿ ಸತ್ಯನಾರಾಯಣ ಭಟ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಸ್ವಾಗತಿಸಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.
ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷರಾದ ಸುರೇಶ್ ಕಾಸ್ರಬೈಲು, ಉದಯ ಅಂಚನ್, ಕಾರ್ಯಕ್ರಮ ನಿರ್ದೇಶಕಿ ಪುಷ್ಪ ಕುಲಾಲ್, ಕೋಶಾಧಿಕಾರಿ ಆರತಿ, ಸದಸ್ಯರಾದ ಪ್ರದೀಪ್ ಸುವರ್ಣ, ಯೋಗೀಶ್ ಆಚಾರ್ಯ, ಹರಿಣಿ ಪೂಜಾರಿ, ಹರೀಶ್ ಗೋಳಿಕಟ್ಟೆ, ಕೀರ್ತನ್ ಬೋಳ, ಲಲಿತಾ ಆಚಾರ್ಯ, ಮಂಜುನಾಥ ಆಚಾರ್ಯ, ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ, ಶಾಂತರಾಮ್ ಕುಲಾಲ್, ವೀಣಾ ಆಚಾರ್ಯ, ಸುಲೋಚನಾ ಕೋಟ್ಯಾನ್, ಸುರೇಶ್ ಅಬ್ಬನಡ್ಕ ಮೊದಲಾದವರು ಉಪಸ್ಥಿತಿತರಿದ್ದರು.