ನಂದಳಿಕೆ : ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬೋಳ ಗ್ರಾಮದ ಬೋಳ ಪದವು ನಿವಾಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸರೋಜಿನಿ ಮೂಲ್ಯ ಅವರ ಮನೆ ರಿಪೇರಿಗೆ ರೂ. ಹತ್ತು ಸಾವಿರ ಸಹಾಯಧನ ನೀಡಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ದಿನೇಶ್ ಪೂಜಾರಿ ಸಹಾಯಧನ ಮೊತ್ತ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಸೇವಾ ಯೋಜನಾ ಸಮಿತಿಯ ಅಧ್ಯಕ್ಷರಾದ ಪ್ರೇಮ್ ಕುಲಾಲ್, ಪೂರ್ವಾಧ್ಯಕ್ಷರಾದ ರಘುವೀರ್ ಶೆಟ್ಟಿ ಮೊದಲಾದವರಿದ್ದರು.