ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 26ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

0
8


ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 26ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಘಟಕ ಮಟ್ಟದ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವು ಕುಂಟಲಗುAಡಿಯಲ್ಲಿರುವ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು.
26ನೇ ವರ್ಷದ ನೂತನ ಅಧ್ಯಕ್ಷರಾಗಿ ಸುರೇಶ್ ಅಬ್ಬನಡ್ಕ ಅವರು ಪದಪ್ರದಾನ ಸ್ವೀಕರಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾಜಿ ಸಚಿವರು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್ ಬಾಗವಹಿಸಿ ಮಾತನಾಡಿದವರು ತಾಲೂಕಿನಲ್ಲಿ ನೂರಾರು ಸಂಘ ಸಂಸ್ಥೆಗಳಿವೆ ಅದರೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನಿರಂತರ ವರ್ಷಪೂರ್ತಿ ಜನಪರ ಕಾರ್ಯಕ್ರಮಗಳೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ ಹಾಗೂ ಇತರೆ ಸಂಘ ಸಂಸ್ಥೆಗಳಿಗೆ ಮಾದರಿ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದರು.
ವೇದಿಕೆಯಲ್ಲಿ ಕಂಬಳ ಕ್ಷೇತ್ರದ ಸಾಧಕರಾದ ಬೋಳದಗುತ್ತು ಸಂತೋಷ್ ಶೆಟ್ಟಿ, ಉದ್ಯಮಿ ಮರಿಮಾರಗುತ್ತು ಅವಿನಾಶ್ ಮಲ್ಲಿ, ಉದ್ಯಮಿ ಹರೀಶ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಯುವ ಉದ್ಯಮಿ ಸುರೇಶ್ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.
ಪದಗ್ರಹಣ ಸಮಾರಂಭದಲ್ಲಿ ಉಪಾಧ್ಯಕ್ಷರಾಗಿ ರಘುವೀರ್ ಶೆಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಅಬ್ಬನಡ್ಕ, ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರದೀಪ್ ಸುವರ್ಣ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಸುಲೋಚನಾ ಕೋಟ್ಯಾನ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಸ್ವಾಗತಿಸಿದರು, ವೀಣಾ ಆಚಾರ್ಯ, ಕಿರಣ್ ಶೆಟ್ಟಿ, ಅನ್ನಪೂರ್ಣ ಕಾಮತ್ ಅವರು ನೂತನ ಸದಸ್ಯರ ಪರಿಚಯ ವಾಚಿಸಿರು, ಪದ್ಮಶ್ರೀ ಪೂಜಾರಿ ಸನ್ಮಾನಿತರ ಪರಿಚಯ ವಾಚಿಸಿದರು, ನೂತನ ಕಾರ್ಯದರ್ಶಿ ಸತೀಶ್ ಅಬ್ಬನಡ್ಕ ವಂದಿಸಿದರು.

LEAVE A REPLY

Please enter your comment!
Please enter your name here