ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವಿಶ್ವ ಮಹಿಳಾ ದಿನಾಚರಣೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿಶೇಷ ಆಟೋಟ ಸ್ಪರ್ಧೆ

0
12

ಸಮಾಜದಲ್ಲಿ ಪುರುಷರಷ್ಟೇ ಸ್ತಿçà ಕೂಡ ಸಮಾನಳಾಗಿದ್ದು ಹೆಣ್ಣು ಈ ಸಮಾಜದ ಕಣ್ಣಾಗಿದ್ದಾಳೆ. ಹೆಣ್ಣು ಇವತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಗಣನೀಯ ಸಾಧನೆಯನ್ನು ಮಾಡುತ್ತಿದ್ದಾಳೆ ಎಂದು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ರಾಜೇಶ್ ಕೋಟ್ಯಾನ್ ಹೇಳಿದರು.

ಅವರು ಆದಿತ್ಯವಾರ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ವತಿಯಿಂದ ಜರಗಿದ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ಜರಗಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಉಪಾಧ್ಯಕ್ಷರಾದ ಬೋಳ ರಘುವೀರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಭಜನಾ ಮಂಡಳಿಯ ಉಪಾಧ್ಯಕ್ಷೆ ಅಶ್ವಿನಿ ಬೋಳ ಉಪಸ್ಥಿತಿತರಿದ್ದರು.

ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಪೂರ್ವಾಧ್ಯಕ್ಷರುಗಳಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಸದಸ್ಯರಾದ ಹರೀಶ್ ಪೂಜಾರಿ, ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಸಂಧ್ಯಾ ಶೆಟ್ಟಿ, ಪದ್ಮಶ್ರೀ ಪೂಜಾರಿ, ಪುಷ್ಪ ಕುಲಾಲ್, ವೀಣಾ ಆಚಾರ್ಯ ಮೊದಲಾದವರಿದ್ದರು.

ಲೀಲಾ ಪೂಜಾರಿ ಸ್ವಾಗತಿಸಿದರು, ಲಲಿತಾ ಆಚಾರ್ಯ ವಂದಿಸಿದರು, ಶ್ರದ್ಧಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here