ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ವಿಶ್ವ ಯೋಗ ದಿನಾಚರಣೆ

0
11

ನಂದಳಿಕೆನ :ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಸಂಘದ ರಂಗಮAದಿರದಲ್ಲಿ ಸಂಘದ ರಜತ ವರ್ಷದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.
ನಂದಳಿಕೆ ಲಲಿತಾ ಆಚಾರ್ಯ ಅವರು ಯೋಗ ತರಬೇತಿ ನೀಡಿ ಮಾತನಾಡಿದವರು ಯೋಗವು ಎಲ್ಲ ಸಮಸ್ಯೆಗಳಿಗೆ ಪರಿಹಾರವೆಂದು ಹಾಗೂ ಯೋಗವು ಮಾನಸಿಕ ಹಾಗೂ ಶಾರೀರಿಕ ಸಮತೋಲನ ಕಾಪಾಡುವಲ್ಲಿ ಮಹತ್ತರ ಪಾತ್ರವಹಿಸುತ್ತದೆ ಎಂದರು ಅದ್ದರಿಂದ ಯೋಗವನ್ನು ದೈನಂದಿನ ಚಟುವಟಿಕೆಯಾಗಿ ಮಾಡಿಕೊಳ್ಳುವುದು ರೂಢಿಯಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಉದಯ ಅಂಚನ್, ಕಾರ್ಯಕ್ರಮದ ನಿರ್ದೇಶಕ ಅನ್ನಪೂರ್ಣ ಕಾಮತ್, ಉಪಾಧ್ಯಕ್ಷ ಸತೀಶ್ ಅಬ್ಬನಡ್ಕ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಸದಸ್ಯರಾದ ವೀಣಾ ಪೂಜಾರಿ, ಯೋಗೀಶ್ ಆಚಾರ್ಯ, ಹರಿಣಿ ಪೂಜಾರಿ, ಪುಷ್ಪ ಕುಲಾಲ್, ಸುಲೋಚನಾ ಕೋಟ್ಯಾನ್, ವೀಣಾ ಆಚಾರ್ಯ, ಮಂಜುನಾಥ ಆಚಾರ್ಯ, ಪ್ರದೀಪ್ ಸುವರ್ಣ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here