ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ೨೬ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆ ಸಲ್ಲಿಸಿ ಹುತಾತ್ಮ ಯೋಧರ ಸ್ಮರಣಾರ್ಥ ನಮ್ಮ ಸಂಘದ ಬಳಿ ಗಿಡ ನೆಡುವ ಮೂಲಕ ಸೈನಿಕರಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ದಿನೇಶ್ ಪೂಜಾರಿ ಮಾತನಾಡಿದವರು ಪ್ರತಿಯೊಂದು ಕೆಲಸ ಕಾರ್ಯ, ಸಾಧನೆ, ಗೆಲುವಿನ ಹಿಂದೆ ಬಹಳಷ್ಟು ಜನರ ಬಲಿದಾನವಿದೆ. ೧೯೯೯ರಲ್ಲಿ ಪಾಕ್ ಭಾರತೀಯ ಗಡಿ ಆಕ್ರಮಿಸಿದ್ದರ ವಿರುದ್ಧ ನಡೆದ ಯುದ್ಧದಲ್ಲಿ ೫೨೭ ಸೈನಿಕರು ವೀರ ಮರಣವನ್ನಪ್ಪಿದರು. ೧೩೫೦ಕ್ಕೂ ಅಧಿಕ ವೀರ ಯೋಧರು ಗಾಯಾಳುಗಳಾಗಿದ್ದರು. ಇಂದು ಕಾರ್ಗಿಲ್ ವಿಜಯೋತ್ಸವವಾಗಿ ೨೬ ವರ್ಷಗಳೇ ಸಂದಿದೆ. ಕಾರ್ಗಿಲ್ ವಿಜಯ ಹಾಗೂ ಸೈನಿಕರ ಕೆಚ್ಚೆದೆಯ ಹೋರಾಟದ ನೆನಪಿಗಾಗಿ ಭಾರತಾಂಬೆಯ ಭಾವಚಿತ್ರದೆದುರು ನಮ್ಮ ವೀರ ಸೈನಿಕರಿಗೆ ಗೌರವ ಸಲ್ಲಿಸುತ್ತಿದ್ಧೇವೆ ಎಂದರು.
ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ಸುರೇಶ್ ಕಾಸರಬೈಲು, ಉದಯ ಅಂಚನ್, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಪ್ರದೀಪ್ ಸುವರ್ಣ ಕೆಮ್ಮಣ್ಣು, ವೀಣಾ ಪೂಜಾರಿ ಮತ್ತು ವೀಣಾ ಆಚಾರ್ಯ ಮೊದಲಾದವರಿದ್ದರು.
Home Uncategorized ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಕಾರ್ಗಿಲ್ ವಿಜಯ್ ದಿವಸ್, ವೀರ ಯೋಧರ ಸಂಸ್ಮರಣೆ ಹಾಗೂ...