ಅಬ್ಬನಡ್ಕ : ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ 27ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆ ಸಲ್ಲಿಸಿ, ವೀರಯೋಧರ ಬಲಿದಾನವನ್ನು ನೆನಪಿಸಲಾಯಿತು. ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿದ್ದರು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ
ಮಾತನಾಡಿದವರು ಪ್ರತಿಯೊಂದು ಕೆಲಸ ಕಾರ್ಯ, ಸಾಧನೆ, ಗೆಲುವಿನ ಹಿಂದೆ ಬಹಳಷ್ಟು ಜನರ ಬಲಿದಾನವಿದೆ. 1999ರಲ್ಲಿ ಪಾಕ್ ಭಾರತೀಯ ಗಡಿ ಆಕ್ರಮಿಸಿದ್ದರ ವಿರುದ್ಧ ನಡೆದ ಯುದ್ಧದಲ್ಲಿ 572 ಸೈನಿಕರು ವೀರ ಮರಣವನ್ನಪ್ಪಿದರು. 1350ಕ್ಕೂ ಅಧಿಕ ವೀರ ಯೋಧರು ಗಾಯಾಳುಗಳಾಗಿದ್ದರು. ಇಂದು ಕಾರ್ಗಿಲ್ ವಿಜಯೋತ್ಸವವಾಗಿ 27 ವರ್ಷಗಳೇ ಸಂದಿದೆ. ಕಾರ್ಗಿಲ್ ವಿಜಯ ಹಾಗೂ ಸೈನಿಕರ ಕೆಚ್ಚೆದೆಯ ಹೋರಾಟದ ನೆನಪಿಗಾಗಿ ಭಾರತಾಂಬೆಯ ಭಾವಚಿತ್ರದೆದುರು ನಮ್ಮ ವೀರ ಸೈನಿಕರಿಗೆ ಗೌರವ ಸಲ್ಲಿಸುತ್ತಿದ್ಧೇವೆ ಎಂದರು.
ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷರಾದ ದಿನೇಶ್ ಪೂಜಾರಿ, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನ ಕೋಟ್ಯಾನ್, ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಕಾರ್ಯದರ್ಶಿ ಸುಭಾಸ್ ಕೆಮ್ಮಣ್ಣು, ಸಂಘದ ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
