ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗಣೇಶೋತ್ಸವ ಸಂಭ್ರಮದ ಪೂರ್ವಭಾವಿ ಸಭೆ

0
96

ನಂದಳಿಕೆ: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಹಾಗೂ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ಆಗಸ್ಟ್ ೨೭ರಂದು ಜರಗಲಿರುವ ೨೫ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ೧೯ನೇ ವರ್ಷದ ಗಣೇಶೋತ್ಸವ ಸಂಭ್ರಮದ ಪೂರ್ವಭಾವಿ ಸಭೆ ಜರಗಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಯೋಗೀಶ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತಿತರಿದ್ದರು.
ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸುರೇಶ್ ಕಾಸರಬೈಲು ಮಾತನಾಡಿ ವರ್ಷಂಪ್ರತಿಯAತೆ ವಾರ್ಷಿಕೋತ್ಸವ ಹಾಗೂ ಗಣೇಶೋತ್ಸವ ಸಂಭ್ರಮ ಜಂಟಿಯಾಗಿ ಜರಗುತ್ತಿದ್ದು ಗಣೇಶೋತ್ಸವದ ಧಾರ್ಮಿಕ ಪೂಜಾ ಕಾರ್ಯಕ್ರಮ, ಕ್ರೀಡೋತ್ಸವ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆ ನಡೆಯುತ್ತಿದ್ದು ವಿವಿಧ ಸಮಿತಿಗಳನ್ನು ರಚಿಸಿ ಸದಸ್ಯರಿಗೆ ಜವಾಬ್ದಾರಿ ನೀಡಲಾಗುವುದೆಂದು ಸಭೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here