ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ವೈದ್ಯಕೀಯ ಚಿಕಿತ್ಸೆಗೆ ನೆರವು ಹಸ್ತಾಂತರಿಸಲಾಯಿತು.
ಬೋಳ ಗ್ರಾಮದ ಕೊಳಜಾಲು ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಆಶಾ ಆಚಾರ್ಯ ಅವರು ಗಂಡ ಹಾಗೂ ಇಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸಿಸುತ್ತಿದ್ದಾರೆ. ಇತ್ತೀಚೆಗೆ ಇವರ ದೊಡ್ಡ ಮಗಳು ಬಿದ್ದು ಕಾಲಿಗೆ ಪೆಟ್ಟಾಗಿ ಎರಡು ಬಾರಿ ಶಸ್ತç ಚಿಕಿತ್ಸೆ ಮಾಡಲಾಗಿದೆ. ಇದೀಗ ಇವರ ಸಂಶಾರಕ್ಕೆ ಆಧಾರ ಸ್ತಂಭವಾಗಿದ್ದ ಇವರ ಗಂಡ ಹರೀಶ್ ಆಚಾರ್ಯ ಅವರಿಗೆ ಜಾಂಡೀಸ್ ಕಾಯಿಲೆ ಹೆಚ್ಚಾಗಿ ಲಿವರ್ ಸಂಪೂರ್ಣವಾಗಿ ನಿಷ್ಕಿçಯಗೊಂಡಿರುವ ಇವರ ಹೆಚ್ಚಿನ ಚಿಕಿತ್ಸೆಗೆ ಹದಿನೈದು ಲಕ್ಷ ಮೊತ್ತದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಇವರ ಆರ್ಥಿಕ ಸಂಕಷ್ಟದ ಪರಿಸ್ಥಿತಿಯನ್ನು ಕಂಡು ಇವರ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯದ ನೆರವು ಹಸ್ತಾಂತರಿಸಲಾಯಿತು.
ನAದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಸಹಾಯಧನದ ಮೊತ್ತ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಉಪಸ್ಥಿತಿತರಿದ್ದರು.

