ನಂದಳಿಕೆ: ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ, ಮನೋರಂಜನೆ, ಸಾಹಿತ್ಯ, ಸ್ವಚ್ಛತೆ, ಕೃಷಿ ಮುಂತಾದ ಹಲವಾರು ಕ್ಷೇತ್ರಗಳಲ್ಲಿ ನಿರಂತರ ಜನಪರ ಕಾರ್ಯಕ್ರಮಗಳೊಂದಿಗೆ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಅಬ್ಬನಡ್ಕದಲ್ಲಿ ಕಳೆದ 25 ವರ್ಷಗಳಿಂದ ಗುರುತಿಸಿಕೊಂಡಿರುವ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ರಜತ ವರ್ಚಾಚರಣೆಯ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಮೈಂದ್ಕಲ್ ಬಳಿ ಬಡ ದಂಪತಿಗಳಿಗೆ ಹೊಸ ಮನೆ ನಿರ್ಮಾಣ ಮಾಡಲಾಗಿದೆ.
ಸಂಸ್ಥೆಯ ರಜತ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡ ಗೃಹ ನಿರ್ಮಾಣ ಯೋಜನೆಯಡಿಯಲ್ಲಿ ಬೋಳ ಮೈಂದ್ಕಲ್ ಸುಮತಿ ಕೊರಗ ಮೂಲ್ಯ ದಂಪತಿಗಳ ಮನೆಗೆ ತೆರಳಿ ಪರಿಶೀಲಿಸಿದಾಗ ಮನೆ ಪೂರ್ತಿ ಬೀಳುವ ಸ್ಥಿತಿಯಲ್ಲಿದ್ದು, ತೀರಾ ಸಂಕಷ್ಟದಲ್ಲಿರುವAತಿತ್ತು. ಇಂತಹ ಕಷ್ಟದ ಸಂದರ್ಭವನ್ನು ಪರಿಗಣಿಸಿ ಆ ಮನೆ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮನೆ ನಿರ್ಮಾಣ ಸಂಪೂರ್ಣ ಮುತುವರ್ಜಿ ವಹಿಸಿಕೊಂಡು ಕೆಲಸ ನಿರ್ವಹಿಸಿತು. ಸುಮಾರು ಏಳು ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಿಸಿ ಹಸ್ತಾಂತರಿಸಲಾಯಿತು. ಶನಿವಾರ ಮನೆ ಹಸ್ತಾಂತರ ಹಾಗೂ ಗೃಹ ಪ್ರವೇಶದ ಅಂಗವಾಗಿ ಧಾರ್ಮಿಕ ಪೂಜಾ ಕಾರ್ಯಕ್ರಮ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯವರಿಂದ ಕುಣಿತ ಭಜನಾ ಕಾರ್ಯಕ್ರಮ ಜರಗಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆಯಲ್ಲಿ ಕೇಮಾರು ಮಠದ ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರಿಂದ ನೂತನ ಮನೆಯನ್ನು ಉದ್ಘಾಟಿಸಿ, ಮನೆಯ ನಾಮ ಫಲಕ ಅನಾವರಣಗೊಳಿಸಿ ಮಾತಾಣಾಡಿದವರು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಮಾಡಿರುವ ಸೇವೆ ಎಲ್ಲರಿಗೂ ಮಾದರಿ ಎಂದರು. ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಸಭಾ ಕಾರ್ಯಕ್ರಮದ ದೀಪ ಪ್ರಜ್ವಲನೆಗೈದು ಮಾತಾನಾಡಿದವರು ನಿರಂತರ ಸಾಮಾಜಿಕ ಸೇವಾ ಕಾರ್ಯದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇವೆ ನೀಡುವ ಏಕೈಕ ಸಂಸ್ಥೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್, ಅಬ್ಬನಡ್ಕ ಸೇವಾ ಯೋಜನಾ ಸಮಿತಿಯ ಅಧ್ಯಕ್ಷರಾದ ಪ್ರೇಮ್ ಕುಲಾಲ್ ಇನ್ನಾ ಅವರು ಮನೆಯ ಕೀಲಿ ಕೈ ಹಸ್ತಾಂತರಿಸಿದರು. ನಂದಳಿಕೆ ಪಾರ್ಲ ಸುಬ್ರಹ್ಮಣ್ಯ ಭಟ್ ಅವರು ಆಶೀರ್ವಚನ ನೀಡಿದರು. ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೋಳ ದಿನೇಶ್ ಅಂಚನ್, ಲಯನ್ಸ್ ಕ್ಲಬ್ ವಲಯಾಧ್ಯಕ್ಷರಾದ ವಿಶ್ವನಾಥ್ ಪಾಟ್ಕರ್, ಉದ್ಯಮಿ ದೀಪಕ್ ಕೋಟ್ಯಾನ್ ಇನ್ನಾ, ಮಂಜರಪಲ್ಕೆ ಶ್ರೀ ದುರ್ಗಾಪರಮೇಶ್ವರಿ ಎಂಟರ್‌ಪ್ರೆöÊಸ್ಸಸ್‌ನ ಮಾಲಕರಾದ ಉದಯ ಶೆಟ್ಟಿ, ಅರುಣ್ ಕುಮಾರ್ ನಿಟ್ಟೆ, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಅವಿನಾಶ್ ಜಿ. ಶೆಟ್ಟಿ, ಕಾರ್ಕಳ ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯರಾದ ಪುಷ್ಪ ಸತೀಶ್ ಪೂಜಾರಿ, ಯುವ ಉದ್ಯಮಿ ಯೋಗೀಶ್ ಆಚಾರ್ಯ ಇನ್ನಾ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಅಬ್ಬನಡ್ಕ ಸೇವಾ ಯೋಜನಾ ಸಮಿತಿಯ ಕಾರ್ಯದರ್ಶಿ ರಘುವೀರ್ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಕುಲಾಲ್ ಇನ್ನಾ, ಸುಮತಿ ಕೊರಗ ಮೂಲ್ಯ ಉಪಸ್ಥಿತಿತರಿದ್ದರು. ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಸನ್ಮಾನಿಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಕಾರ್ಯಕ್ರಮ ನಿರೂಪಿಸಿದರು.