ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 26ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ರಜತ ವರ್ಷದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರಿಗೆ ಸಂಘದ ವತಿಯಿಂದ ಸನ್ಮಾನ ನಡೆಸಲಾಯಿತು.
ವೇದಿಕೆಯಲ್ಲಿ ಕಂಬಳ ಕ್ಷೇತ್ರದ ಸಾಧಕರಾದ ಬೋಳದಗುತ್ತು ಸಂತೋಷ್ ಶೆಟ್ಟಿ, ಉದ್ಯಮಿ ಮರಿಮಾರಗುತ್ತು ಅವಿನಾಶ್ ಮಲ್ಲಿ, ಉದ್ಯಮಿ ಹರೀಶ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ಉಪಾಧ್ಯಕ್ಷರಾಗಿ ರಘುವೀರ್ ಶೆಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಅಬ್ಬನಡ್ಕ, ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರದೀಪ್ ಸುವರ್ಣ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷರಾದ ಕೀರ್ತನ್ ಪೂಜಾರಿ ಬೋಳ ಉಪಸ್ಥಿತಿತರಿದ್ದರು.
Home Uncategorized ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ರಜತ ವರ್ಷದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರಿಗೆ...