ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 26ನೇ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ಯುವ ಉದ್ಯಮಿ ಬೆಳ್ಮಣ್ಣು ಸುರೇಶ್ ದೇವಾಡಿಗ ಅವರಿಗೆ ಸಂಘದ ವತಿಯಿಂದ ಸನ್ಮಾನ ನಡೆಸಲಾಯಿತು.
ಸಮಾರಂಭದ ವೇದಿಕೆಯಲ್ಲಿ ಕೆದಿಂಜೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ತುಕಾರಾಮ ಶೆಟ್ಟಿ, ಹೆಬ್ರಿ ಅಮೃತ ಭಾರತಿ ವಿದ್ಯಾ ಸಂಸ್ಥೆಯ ಉಪನ್ಯಾಸಕರಾದ ವೀಣೇಶ್ ಅಮೀನ್ ಸಾಂತೂರು, ಸಂಜೀವ ಕೆದಿಂಜೆ, ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ, ನಿಕಟ ಪೂರ್ವಾಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ಪ್ರಶಾಂತ್ ಪೂಜಾರಿ, ಉಪಾಧ್ಯಕ್ಷರಾಗಿ ರಘುವೀರ್ ಶೆಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಅಬ್ಬನಡ್ಕ ಉಪಸ್ಥಿತಿತರಿದ್ದರು. ಸಂಘದ ಸದಸ್ಯರಾದ ಪದ್ಮಶ್ರೀ ಪೂಜಾರಿ ಸನ್ಮಾನಿತರ ಪರಿಚಯ ವಾಚಿಸಿದರು.