ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ : ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಹಾಗೂ ವಿಶ್ವ ಯುವ ದಿನಾಚರಣೆ

0
26

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಬ್ಬನಡ್ಕ ಇದರ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಂಗಮAದಿರದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಮತ್ತು ವಿಶ್ವ ಯುವ ದಿನಾಚರಣೆ ಕಾರ್ಯಕ್ರಮ ಜರಗಿತು.

ಸ್ವಾಮಿ ವಿವೇಕಾನಂದರು ನನಗೆ ಒಂದು ಸಹಸ್ರ ಉಕ್ಕಿನ ನರಗಳುಳ್ಳ ದೇಶಕ್ಕಾಗಿ ಜೀವಿಸುವ ಶ್ರದ್ಧೆಯುಳ್ಳ, ಕನಸುಗಳುಳ್ಳ ಯುವಕರನ್ನು ನನಗೆ ಕೊಡಿ ನಾನು ದೇಶದ ಚಿತ್ರಣವನ್ನೇ ಬದಲಿಸಬಲ್ಲೆ ಎಂಬ ಮಾತನ್ನು ವಿವೇಕಾನಂದರು ಹೇಳಿದ್ದರು ಎಂದು ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು ಯುವಕರೆಲ್ಲರೂ ಮೈಗೂಡಿಸಿಗೊಂಡಾಗ ಸ್ವಾಮಿ ವಿವೇಕಾನಂದರ ಕನಸಿನ ಸಧೃಢ ರಾಷ್ಟç ನಿರ್ಮಾಣ ಸಾಧ್ಯ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹೇಳಿದರು.

ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಸದಸ್ಯರಾದ ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ, ಪ್ರದೀಪ್ ಸುವರ್ಣ, ಯೋಗೀಶ್ ಆಚಾರ್ಯ, ಭಜನಾ ಮಂಡಳಿಯ ತರಬೇತುದಾರರಾದ ರಾಜೇಂದ್ರ ಶೆಟ್ಟಿಗಾರ್, ನಾಗರಾಜ್ ಕುಲಾಲ್, ಅಬ್ಬನಡ್ಕ ಭಜನಾ ಮಂಡಳಿಯ ಉಪಾಧ್ಯಕ್ಷರಾದ ಅಶ್ವಿನಿ ಬೋಳ, ಕಾರ್ಯದರ್ಶಿ ಶ್ರದ್ಧಾ ಪೂಜಾರಿ ಹಾಗೂ ಭಜನಾ ಮಂಡಳಿಯ ಸದಸ್ಯರು ಮೊದಲಾದವರಿದ್ದರು.

LEAVE A REPLY

Please enter your comment!
Please enter your name here