ನಂದಿಕೂರಿನಲ್ಲಿರುವ M-11 ಕಂಪೆನಿಯಿಂದ ಹೊರ ಬರುವ ದುರ್ವಾಸನೆಯಿಂದ ಸ್ಥಳೀಯ ನಿವಾಸಿಗರಿಗೆ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದು ಈ ಸಂಭಂದ ದಿನಾಂಕ 16-07-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಂದಿಕೂರು ಭಾಗದ ಸ್ಥಳೀಯರು, M-11 ಕಂಪೆನಿಯವರು ಮತ್ತು ಸಂಭಂದಿಸಿದ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಸಭೆಯಲ್ಲಿ M-11 ಕಂಪೆನಿಯಿಂದ ಹೊರಬರುವ ದುರ್ವಾಸನೆ ನಿವಾರಣೆಗೆ ಪರಿಹಾರೋಪಾಯ ಕಂಡುಕೊಳ್ಳುವ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್, ಪರಿಸರ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

