ರಾಮನಗರ: ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮುನ್ಸೂಚನೆ ನೀಡಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಲಾಗುತ್ತದೆ, ಹೆಚ್ಚು ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಅವರು ಘೋಷಿಸಿದ್ದಾರೆ.
ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾನೆ ನೆರವೇರಿಸಿ ಮಾತನಾಡಿದ ಸಿಎಂ ಈ ವಿಷಯ ತಿಳಿಸಿದರು. ನಂದಿನಿ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು, ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದಿದ್ದಾರೆ. ರೈತರಿಗೆ ಇದು ಸಿಹಿ ಸುದ್ದಿಯಾದರೂ, ಗ್ರಾಹಕರಿಗೆ ಶಾಕ್ ನೀಡುವ ಸುದ್ದಿಯಾಗಿದೆ.