ಅ.27ರಿಂದ ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ

0
32

ಬೆಂಗಳೂರು : ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಅಕ್ಟೋಬರ್ 27ರಿಂದ ಪರಿಷ್ಕರಿಸುವ ಸಾಧ್ಯತೆಯಿದ್ದು, ಗ್ರಾಹಕರಿಗೆ ಹಾಲಿನ ಬೆಲೆ ಏರಿಕೆಯ ಬಿಸಿ ತಟ್ಟುವ ನಿರೀಕ್ಷೆಯಿದೆ.

ಹಾಲಿನ ದರ ಪರಿಷ್ಕರಣೆ ಕುರಿತು ಈಗಾಗಲೇ ಸೂಕ್ತ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹೊಸ ದರದ ಕುರಿತು ಅಧಿಕೃತ ಘೋಷಣೆ ಮಾಡಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ನೀತಿ ಸಂಹಿತೆ ತೆರವಾದ ಬಳಿಕ ಅಕ್ಟೋಬರ್ 27ರಿಂದ ಅನ್ವಯವಾಗುವ ಹೊಸ ದರವನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ದರ ಪರಿಷ್ಕರಣೆಯ ನಿರ್ಧಾರ ಜಾರಿಯಾದಲ್ಲಿ ನಂದಿನಿ ಹಾಲು ಖರೀದಿಸುವ ಗ್ರಾಹಕರ ದಿನನಿತ್ಯದ ವೆಚ್ಚದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.