ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಮಧುಪ್ರಪಂಚ ಪತ್ರಿಕೆಯಲ್ಲಿ ಪ್ರಕಟವಾದ ಚಿತ್ರ ಲೇಖನಕ್ಕೆ 2025 ರ ಮಂಗಳ ವರ್ಗೀಸ್ ದತ್ತಿ ನಿಧಿ ಪ್ರಶಸ್ತಿಗೆ ಆಯ್ಕೆಯಾದ ಬರಹ ಅಂಕಣಗಾರ, ವ್ಯಂಗ್ಯ ಚಿತ್ರ ಕಲಾವಿದ,ಸತತ ಎರಡು ಬಾರಿ ಶಿಕ್ಷಣದಲ್ಲಿ ಹಿರಿಮೆಗೆ ರಾಜ್ಯ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಹಿರಿಯ ಪತ್ರಕರ್ತ ನಾರಾಯಣ ರೈ ಕುಕ್ಕುವಳ್ಳಿಯವರಿಗೆ ನೀಡಲಾದ ಪ್ರಶಸ್ತಿಯನ್ನು, ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ದ ಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಇತ್ತೀಚೆಗೆ ಪ್ರದಾನ ಮಾಡಲಾಯಿತು . ಈ ಸಂದರ್ಭದಲ್ಲಿ ದಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್.,ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಸಮಿತಿಯ ಉಪಾಧ್ಯಕ್ಷರು ಆರೀಫ್ ಪಡುಬಿದ್ರೆ,ವಿಲ್ಫ್ರೆಡ್ ಡಿ ಸೋಜ, ರಾಜೇಶ್ ಶೆಟ್ಟಿ, ಕೋಶಾಧಿಕಾರಿ ವಿಜಯ ಕೋಟ್ಯಾನ್ ಪಡು, ಕಾರ್ಯ ದರ್ಶಿ ಸಿದ್ಧಿಕ್ ನೀರಾಜೆ, ಸುರೇಶ್ ಡಿ ಪಳ್ಳಿ,ಸತೀಶ್ ಇರಾ ಹಾಗೂ ಇತರ ಕಾರ್ಯಕಾರಿ ಸಮಿತಿ ಸದಸ್ಯ ರು ಉಪಸ್ಥಿತರಿದ್ದರು.ಪ್ರಶಸ್ತಿ ಪುರಸ್ಕೃತ ನಾರಾಯಣ ರೈ ಕುಕ್ಕುವಳ್ಳಿ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.



