Thursday, July 25, 2024
Homeರಾಜಕೀಯಸತತ 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ಸತತ 3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು.

ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಜಾಲಾ ಸತೀಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಓಬಿಸಿ ಮೋರ್ಚಾ ಉಪಾಧ್ಯಕ್ಷೆ ಭಾರತೀ ಚಂದ್ರಶೇಖರ್, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷೆ ದಯಾಶಿನಿ, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಕಾರ್ಯದರ್ಶಿ ಆನಂದ ಸುವರ್ಣ, ಉಡುಪಿ ನಗರ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮೀಶ ಬಂಗೇರ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಆಸೀಫ್ ಕಟಪಾಡಿ, ಪ್ರಮುಖರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ವೆಂಕಟರಮಣ ಕಿದಿಯೂರು, ನೀತಾ ಪ್ರಭು, ಸರೋಜಾ ಶೆಣೈ, ಪೂರ್ಣಿಮಾ ಶೆಟ್ಟಿ, ಪ್ರೀತಿ, ದೀಪಾ ಪೈ, ಸುಗುಣಾ ನಾಯ್ಕ್, ಸಂತೋಷ್ ಆಚಾರ್ಯ, ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ ಕುಕ್ಕಿಕಟ್ಟೆ, ಹೇಮನಾಥ್ ಹೆಗ್ಡೆ, ದಿವಾಕರ್ ಶೆಟ್ಟಿ, ನಾಗರಾಜ್ ಕರ್ಕೇರ, ರಾಜೇಶ್ ಸುವರ್ಣ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular