ಮೂಡುಬಿದಿರೆ: ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುತ್ತಿಗೆ ಗುಡ್ಡೆಬೆಟ್ಟು ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿದಿದ್ದು, ಅಪಾಯದ ಭೀತಿ ಎದುರಾಗಿದೆ.
ಇತ್ತೀಚಿನ ಮಳೆಯಿಂದಾಗಿ ತಡೆಗೋಡೆಯ ಒಂದು ಭಾಗ ಕುಸಿದಿರುವುದರಿಂದ ಕಾಮಗಾರಿಯ ಗುಣಮಟ್ಟದ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಮಳೆ ಇದೇ ರೀತಿ ಮುಂದುವರಿದರೆ ಮತ್ತಷ್ಟು ಕುಸಿತ ಸಂಭವಿಸುವ ಸಾಧ್ಯತೆ ಇದ್ದು, ವಾಹನ ಸಂಚಾರಕ್ಕೂ ಅಪಾಯ ಉಂಟಾಗುವ ಭೀತಿ ಇದೆ.

