Thursday, April 24, 2025
Homeಮಂಗಳೂರುರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ "ಟೆಕ್ ಯುವ - 25" ಕಾರ್ಯಕ್ರಮ

ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ “ಟೆಕ್ ಯುವ – 25” ಕಾರ್ಯಕ್ರಮ

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ “ಟೆಕ್ ಯುವ – 25” ಕಾರ್ಯಕ್ರಮವು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಸಿಎ ಎ. ರಾಘವೇಂದ್ರ ರಾವ್ ಮತ್ತು ಗೌರವಾನ್ವಿತ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಅವರ ಆಶೀರ್ವಾದ ಮತ್ತು ಮಾರ್ಗದರ್ಶನದೊಂದಿಗೆ ಇಂದು ಬೆಳಿಗ್ಗೆ ಉದ್ಘಾಟನೆಗೊಂಡಿತು. 

ಬೆಂಗಳೂರಿನ ಐಸ್ಪಿ ಆಗ್ರೋ ರೋಬೋಟಿಕ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಮಂಗಳೂರಿನ ಅಗ್ರಿಲೀಫ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಶ್ರೀ ಅವಿನಾಶ್ ರಾವ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ದೀಪವನ್ನು ಬೆಳಗಿಸುವ ಮೂಲಕ ಟೆಕ್ ಯುವ 25 ತಾಂತ್ರಿಕ ಉತ್ಸವವನ್ನು ಉದ್ಘಾಟಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ. ಸತ್ಯನಾರಾಯಣ ರೆಡ್ಡಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಮುಖ್ಯಸ್ಥರಾದ ಡಾ. ರಾಮಕೃಷ್ಣ ಎನ್ ಹೆಗಡೆ, ಟೆಕ್ ಯುವ ಕಾರ್ಯಕ್ರಮದ ಸಂಚಾಲಕರಾದ ಪ್ರೊ. ಕೆ. ಶ್ರೀನಾಥ್ ರಾವ್, ಟೆಕ್ ಯುವ-25 ರ ವಿದ್ಯಾರ್ಥಿ ಸಮನ್ವಯಕಾರರಾದ ಮೊಹಮ್ಮದ್ ಸೈಫಾಜ್, ಆಕಾಶ್ ಕುಲಾಲ್, ಕುಮಾರಿ ಚೈತ್ರ ರಾವ್ ಮತ್ತು ಕಿರಣ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉದ್ಘಾಟನಾ ಭಾಷಣವನ್ನು ಮಾಡಿದ ಮುಖ್ಯ ಅತಿಥಿಗಳಾದ ಶ್ರೀ ಅವಿನಾಶ್ ರಾವ್ ರವರು ಮಾತನಾಡಿ, ಟೆಕ್ ಯುವ ಕಾರ್ಯಕ್ರಮವನ್ನು ಸಂಯೋಜಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಮತ್ತು ಕಾರ್ಯಕ್ರಮವನ್ನು ಆಯೋಜಿಸಿದ ವಿದ್ಯಾರ್ಥಿಗಳ ಉತ್ತಮ ಪ್ರಯತ್ನವನ್ನು ಶ್ಲಾಘಿಸಿದರು. ವೃತ್ತಿಜೀವನದಲ್ಲಿ ತಂಡದ ಒಗ್ಗಟ್ಟಿನ ಮಹತ್ವ ಹಾಗೂ ಸಂವಹನ ಕೌಶಲ್ಯದ ಬಗ್ಗೆ ಪ್ರಭಾವಶಾಲಿ ಸಲಹೆಗಳನ್ನು ನೀಡಿದರು. “ನಿಮ್ಮ ಸುತ್ತಮುತ್ತಲಿರುವ ಜನರೊಂದಿಗೆ ಸಂವಹನ ನಡೆಸಿ, ಅವರ ಜೀವನ ಅನುಭವಗಳಿಂದ ಪ್ರೇರಿತರಾಗಿರಿ. ಉತ್ತಮ ನಾಯಕನಾಗಲು ತಂಡದೊಂದಿಗೆ ಕೆಲಸ ಮಾಡುವುದು ಅಗತ್ಯ. ಉತ್ತಮ ಸಂವಹನವು ವ್ಯವಹಾರ ಅಭಿವೃದ್ಧಿಗೆ ಅತ್ಯಗತ್ಯ, ಏಕೆಂದರೆ ಇದು ಜನರನ್ನು ವಿಶ್ವಾಸಕ್ಕೆ ತಂದು ಹೊಸ ಅವಕಾಶಗಳನ್ನು ಪಡೆಯಲು ಸಹಾಯ ಮಾಡುತ್ತದೆ. ಜ್ಞಾನ ಮತ್ತು ಕೌಶಲ್ಯಗಳನ್ನು ಉತ್ಕೃಷ್ಟಗೊಳಿಸುವ ಮೂಲಕ ನಿಮ್ಮ ವೃತ್ತಿಜೀವನದಲ್ಲಿ ಯಶಸ್ಸನ್ನು ಹೊಂದುವಂತಾಗಲಿ ಎಂದು ಹೇಳಿ ಶುಭ ಹಾರೈಸಿದರು.

ಅಧ್ಯಕ್ಷೀಯ ಭಾಷಣವನ್ನು ಮಾಡಿದ ಡಾ. ಕೆ. ಸತ್ಯನಾರಾಯಣ ರೆಡ್ಡಿ ಯವರು ಮಾತನಾಡಿ, ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಸೃಜನಶೀಲತೆಯ ಮಹತ್ವವನ್ನು ವಿವರಿಸಿದರು. “ಇಂಜಿನಿಯರಿಂಗ್‌ಗೆ ಸೃಜನಶೀಲತೆ ಇಲ್ಲದಿದ್ದರೆ ಅದು ಆತ್ಮವಿಲ್ಲದ ದೇಹದಂತೆ. ಈ ತಾಂತ್ರಿಕ ಉತ್ಸವವು ತಾಂತ್ರಿಕತೆ, ಸಾಂಸ್ಕೃತಿಕ ಮತ್ತು ಕ್ರೀಡಾ ಕೌಶಲ್ಯದ ಪರಿಪೂರ್ಣ ಸಂಯೋಜನೆ ಆಗಿದೆ, ಸ್ಪರ್ಧೆಗಳ ಮೂಲಕ ಪ್ರತಿಭೆಯನ್ನು ಪ್ರದರ್ಶಿಸಲು ಹಾಗೂ ಆತ್ಮವಿಶ್ವಾಸವನ್ನು ವೃದ್ಧಿಸಲು ಒಳ್ಳೆಯ ವೇದಿಕೆಯಾಗಿದೆ” ಎಂದು ಹೇಳಿದರು. ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಮುಖ್ಯಸ್ಥರಾದ ಡಾ. ರಾಮಕೃಷ್ಣ ಎನ್. ಹೆಗಡೆ ಯವರು ಸ್ವಾಗತ ಭಾಷಣವನ್ನು ಮಾಡಿದರು.

ಟೆಕ್ ಯುವ 25 ಕಾರ್ಯಕ್ರಮದ ಸಂಚಾಲಕರಾದ ಪ್ರೊ. ಕೆ. ಶ್ರೀನಾಥ್ ರಾವ್ ರವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು, ಹಾಗೂ ಟೆಕ್ ಯುವ ಕಾರ್ಯಕ್ರಮದ ಹಿನ್ನಲೆ ಹಾಗೂ ಕಾರ್ಯಕ್ರಮದ ಮಾಹಿತಿಯನ್ನು ಸಭೆಗೆ ನೀಡಿದರು. ವಿಶ್ವವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಡಾ. ಶ್ವೇತಾ ಪೈ ಯವರು ವಂದನಾರ್ಪಣೆ ಸಲ್ಲಿಸಿದರು.‌ ವಿದ್ಯಾರ್ಥಿ ಸ್ಯಾಮ್ ಅವಿನ್ ಬಂಗೇರಾ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಪ್ರಜ್ಞಾ ಪ್ರಾರ್ಥನೆಯನ್ನು ಮಾಡಿದರು. 

ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕರಾದ ಡಾ. ಪ್ರವೀಣ್ ಬಿ.ಎಂ., ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಕಾಲೇಜಿನ ವಿದ್ಯಾರ್ಥಿಗಳು, ಹಾಗೂ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಿಂದ ಆಗಮಿಸಿದ ಸ್ಪರ್ಧಾಳುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸುಮಾರು 1,500 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎರಡು ದಿನಗಳ ಕಾಲ ನಡೆಯಲಿರುವ ಟೆಕ್ ಯುವ 25 ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಈ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ವಿಭಾಗಗಳಲ್ಲಿ 52 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇದು ದೇಶದಾದ್ಯಂತ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಾಗೂ ವೃತ್ತಿಪರ ಅನುಭವ ನೀಡುವ ವಿಶೇಷ ಕಾರ್ಯಕ್ರಮವಾಗಿದೆ.

RELATED ARTICLES
- Advertisment -
Google search engine

Most Popular