ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

0
5

ಸೇವಾ ಮನೋಭಾವ, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಲು ಕರೆ

ಪುತ್ತೂರು : ಅಕ್ಷಯ ಕಾಲೇಜಿನಲ್ಲಿ ಸೆ.24ರಂದು ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕರಾದ ಶ್ರೀ ನಾರಾಯಣ ನಾಯಕ್ ಅವರು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ. ಪಕ್ಕಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆಯ ಉತ್ತಮ ಸ್ವಯಂಸೇವಕರಾಗಿ ಆಯ್ಕೆಯಾದ III ಬಿಕಾಂ ವಿದ್ಯಾರ್ಥಿಗಳಾದ ಸುಹಾಸ್ ಹಾಗೂ III ಬಿಎ ವಿದ್ಯಾರ್ಥಿನಿ ಕೋಮಲಾಕ್ಷಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಯೋಜಕರು, ಎನ್‌ಎಸ್‌ಎಸ್ ಯೋಜನಾಧಿಕಾರಿಗಳು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಮತ್ತಷ್ಟು ಬೆಳೆಸುವ ಮಹತ್ವದ ಸಂದೇಶವನ್ನು ನೀಡಿತು.