ರಾಷ್ಟ್ರೀಯ ಏಕತಾ ದಿವಸ-2025

0
48

ಬಂಟ್ವಾಳ: ಸ್ವತಂತ್ರ ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ವಲ್ಲಭಾಯ್ ಪಟೇಲರ ಯೋಗದಾನ ಮಹತ್ತರವಾದುದು. ಉಕ್ಕಿನ ಮನುಷ್ಯನೆಂದೇ ಖ್ಯಾತರಾದ ಇವರು ಸ್ವತಂತ್ರ ಭಾರತದ ಮೊಟ್ಟಮೊದಲ ಗೃಹಮಂತ್ರಿಗಳಾಗಿ ದೇಶಕ್ಕೆ ನೀಡಿದ ಸೇವೆ ಅನುಪಮವಾದುದು. ಇವರನ್ನು ಇಂದಿನ ಯುವಜನತೆ ಆದರ್ಶವಾಗಿರಿಸಿಕೊಂಡು ಮುನ್ನಡೆಯಬೇಕು ಎಂದು

ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ. ಮಂಚಿ ನುಡಿದರು. ಇವರು ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ ಹಾಗೂ ಐ.ಕ್ಯೂ.ಎ.ಸಿ. ಆಶ್ರಯದಲ್ಲಿ ನಡೆದ ರಾಷ್ಟಿçÃಯ ಏಕತಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟಿçÃಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತಿç ಹೆಚ್.ವಿ. ನೆರೆದವರಿಗೆ ಏಕತಾ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು ಹಾಗೂ ಬಿ.ಆರ್.ಎಂ.ಪಿ.ಸಿ. ಶಾಲೆಯ ಕನ್ನಡ ಶಿಕ್ಷಕರಾದ
ಮನೋಹರ ಎಸ್ ದೊಡಮನಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ‘ಏಕತಾ ನಡಿಗೆ’ಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here